ಕನ್ನಡದ ಕುರಿತು ಅಭಿಮಾನ ಬೆಳಸಿಕೊಳ್ಳೋಣ

ಹೊನ್ನಾವರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದಿಸಲಾಯಿತು. ಪ್ರವೀಣ ಕರಾಂಡೆ, ಜಯಶ್ರೀ ನಾಯ್ಕ, ಬಿ.ಎನ್. ವಾಸರೆ, ಪಿ.ಆರ್. ನಾಯ್ಕ ಇತರರಿದ್ದರು.
ಹೊನ್ನಾವರದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದಿಸಲಾಯಿತು. ಪ್ರವೀಣ ಕರಾಂಡೆ, ಜಯಶ್ರೀ ನಾಯ್ಕ, ಬಿ.ಎನ್. ವಾಸರೆ, ಪಿ.ಆರ್. ನಾಯ್ಕ ಇತರರಿದ್ದರು.
Published on
ಹೊನ್ನಾವರ: ಕನ್ನಡ ಭಾಷೆಯ ಕುರಿತು ನಾವೆಲ್ಲರೂ ಅಭಿಮಾನವನ್ನು ಹೊಂದಿರಬೇಕು ಎಂದು ತಹಸೀಲ್ದಾರ್ ಪ್ರವೀಣ ಕರಾಂಡೆ ಹೇಳಿದರು.
ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲೂಕು ಘಟಕಗಳ ಆಶ್ರಯದಲ್ಲಿ ಎಸ್ಸೆಸ್ಸೆಲ್ಸಿಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಯಶ್ರೀ ನಾಯ್ಕ ಮಾತನಾಡಿ, ಕನ್ನಡ ಭಾಷೆಗೆ ತುಂಬಾ ಪ್ರಾಮುಖ್ಯತೆಯಿದೆ. ಕನ್ನಡ ಭಾಷೆಯಲ್ಲಿ ಪೂರ್ಣಾಕ ಪಡೆದ ವಿದ್ಯಾರ್ಥಿಗಳ ಸಾಧನೆ ಮೆಚ್ಚುವಂತದ್ದು, ಅವರನ್ನು ಸಾಹಿತ್ಯ ಪರಿಷತ್ತಿನ ವತಿಯಿಂದ ಅಭಿನಂದಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ, ಕನ್ನಡ ಶಾಲೆಗಳು ಇತ್ತೀಚೆಗೆ ಮುಚ್ಚಲ್ಪಡುತ್ತಿರುವುದು ಆತಂಕಕಾರಿ ಸಂಗತಿ. ನಮ್ಮ ನಾಡಭಾಷೆಯನ್ನು ಕೊಲ್ಲುವಷ್ಟು ಅನ್ಯಭಾಷೆಯ ವ್ಯಾಮೋಹ ಬೇಡ. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡ ಪ್ರೀತಿಯನ್ನು ಬಿತ್ತುವ ಕೆಲಸ ಪರಿಷತ್ತಿನಿಂದ ನಿರಂತರವಾಗಿ ನಡೆಯುತ್ತಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮತ್ತು ತಾಲೂಕು ಅಧ್ಯಕ್ಷ ಸುಧೀಶ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ಎಸ್​ಎಸ್​ಎಲ್​ಸಿಯಲ್ಲಿ ಕನ್ನಡ ವಿಷಯದಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್. ನಾಯ್ಕ, ಮಾಧ್ಯಮಿಕ ಶಾಲಾ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷ ಎಲ್.ಎಂ. ಹೆಗಡೆ, ಸಾಹಿತಿ ಸುರೇಶ ನಾಯ್ಕ, ನ್ಯೂ ಇಂಗ್ಲೀಷ್ ಸ್ಕೂಲ್ ಅಧ್ಯಕ್ಷ ರಘು ಪೈ, ಕಸಾಪ ಕೋಶಾಧ್ಯಕ್ಷ ನಾರಾಯಣ ಹೆಗಡೆ ಹಾಗೂ ವಿದ್ಯಾರ್ಥಿಗಳು ಇದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಗೌರವ ಕಾರ್ಯದರ್ಶಿ ಎಚ್.ಎಂ. ಮಾರುತಿ ಸ್ವಾಗತಿಸಿದರು. ತಾಲೂಕು ಅಧ್ಯಕ್ಷ ಎಸ್.ಎಚ್. ಗೌಡ ಪ್ರಾಸ್ತಾವಿಕ ಮಾತನಾಡಿದರು. ಸದಸ್ಯ ಕೇಶವ ಶೆಟ್ಟಿ ವಂದಿಸಿದರು. ಮಹೇಶ ಭಂಡಾರಿ ನಿರ್ವಹಿಸಿದರು. ಸಾಹಿತ್ಯ ಪರಿಷತ್ತಿನ ಸದಸ್ಯರು ಸಹಕರಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net