Network problem ನೆಟ್‌ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲಿ

ಕೇಂದ್ರ ಸಚಿವ ಜ್ಯೋತಿರಾಧ್ಯ ಸಿಂಧಿಯಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಜಿಲ್ಲೆಯ ಮೊಬೈಲ್ ಟಾವರ್ ಸಮಸ್ಯೆ ಬಗ್ಗೆ ಚರ್ಚಿಸಿದರು.
ಕೇಂದ್ರ ಸಚಿವ ಜ್ಯೋತಿರಾಧ್ಯ ಸಿಂಧಿಯಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಜಿಲ್ಲೆಯ ಮೊಬೈಲ್ ಟಾವರ್ ಸಮಸ್ಯೆ ಬಗ್ಗೆ ಚರ್ಚಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕೇಂದ್ರ ಸಚಿವ ಜ್ಯೋತಿರಾಧ್ಯ ಸಿಂಧಿಯಾಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

ಶಿರಸಿ: ಗುಡ್ಡಗಾಡು ಪ್ರದೇಶವೇ ಅಧಿಕವಾಗಿರುವ ಉತ್ತರ ಕನ್ನಡದ ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಇನ್ನೂ ಇದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಹೋಗಲಾಡಿಸಲು ಕ್ರಮ ಕೈಗೊಳ್ಳುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ದೂರ ಸಂಪರ್ಕ ಇಲಾಖೆ ಸಚಿವ ಜ್ಯೋತಿರಾಧ್ಯ ಸಿಂಧಿಯಾ ಅವರಲ್ಲಿ ವಿನಂತಿಸಿದ್ದಾರೆ.

ದೆಹಲಿಯಲ್ಲಿ ಸೋಮವಾರ ಸಚಿವರನ್ನು ಭೇಟಿಯಾದ ಕಾಗೇರಿ, ಮಳೆಗಾಲದ ದಿನಗಳಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ಗ್ರಾಮೀಣ ಪ್ರದೇಶದ ಬಿಎಸ್ಸೆನ್ನೆಲ್ ಮೊಬೈಲ್ ಗೋಪುರಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಇನ್ನೂ ಹಲವು ಟಾವರ್‌ಗಳಿಗೆ ಬ್ಯಾಟರಿ ಸೌಲಭ್ಯ ಒದಗಿಸಬೇಕಾಗಿದೆ. ಅಲ್ಲದೆ, ಇನ್ನೂ ಹಲವಾರು ಮೊಬೈಲ್ ಟಾವರ್‌ಗಳನ್ನು 4ಜಿಗೆ ಬದಲಿಸಬೇಕಿದೆ. ಆಪ್ಟಿಕಲ್ ೈಬರ್ ಕೇಬಲ್ ಸಂಪರ್ಕವೂ ಅನೇಕ ಟಾವರ್‌ಗಳಿಗೆ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಕಾಗೇರಿಯವರ ಬೇಡಿಕೆಗೆ ಸ್ಪಂದಿಸಿದ ಜ್ಯೋತಿರಾಧ್ಯ ಸಿಂಧಿಯಾ, ತಕ್ಷಣವೇ ಈ ಬಗ್ಗೆ ಗಮನ ಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಸದರ ಕಾರ್ಯಾಲಯ ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net