ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಪಲ್ಟಿಯಾಗಿರುವ ಲಾರಿ.
ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಪಲ್ಟಿಯಾಗಿರುವ ಲಾರಿ.
Published on
ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ತಾಲೂಕಿನ ಅರಬೈಲ್ ಘಟ್ಟದ ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಲಾರಿ, ಅರಬೈಲ್ ಘಟ್ಟದ ತಿರುವಿನಲ್ಲಿ ರಸ್ತೆಯ ಬಲಬದಿಯ ಗಟಾರದಲ್ಲಿ ಪಲ್ಟಿಯಾಗಿದೆ.
ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net