ಮಾರಿಕಾಂಬಾ ದೇವಿ ಜಾತ್ರೆ ಸಿದ್ಧತೆ ಪರಿಶೀಲನೆ MARIKAMBA

ಶಿರಸಿಯ ಮಾರಿಕಾಂಬಾ (MARIKAMBA) ದೇವಿ ಜಾತ್ರೆ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಸಿದ್ಧತೆಗಳನ್ನು ಪರಿಶೀಲಿಸಿದರು. ಜಗದೀಶ ಗೌಡ, ಗೀತಾ ಪಾಟೀಲ ಇತರರಿದ್ದರು.
ಶಿರಸಿಯ ಮಾರಿಕಾಂಬಾ (MARIKAMBA) ದೇವಿ ಜಾತ್ರೆ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಸಿದ್ಧತೆಗಳನ್ನು ಪರಿಶೀಲಿಸಿದರು. ಜಗದೀಶ ಗೌಡ, ಗೀತಾ ಪಾಟೀಲ ಇತರರಿದ್ದರು.
Published on
ಶಿರಸಿ: ನಾಡಿನ ಸುಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ (MARIKAMBA) ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ ಸೋಮವಾರ ನಗರದ ವಿವಿಧೆಡೆ ಭೇಟಿ ನೀಡಿ ಸಿದ್ಧತಾ ಕ್ರಮಗಳನ್ನು ಖುದ್ದಾಗಿ ಪರಿಶೀಲಿಸಿದರು.
ಮೊದಲು ನಗರದ ಬಿಡಕಿಬೈಲ್‌ನಲ್ಲಿರುವ ಮಾರಿ ಚಪ್ಪರದ ಬಳಿಗೆ ತೆರಳಿದ ಶಾಸಕರು, ಅಲ್ಲಿ ನಡೆಯುತ್ತಿರುವ ಕಾಮಗಾರಿ ಹಾಗೂ ಜಾತ್ರಾ ಸಿದ್ಧತೆಗಳನ್ನು ವೀಕ್ಷಿಸಿದರು. ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಶಿರಸಿಯ ಆರಾಧ್ಯದೈವ ಶ್ರೀ ಮಾರಿಕಾಂಬಾ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ಅಂತಿಮ ಹಂತದ ಸಿದ್ಧತೆಗಳನ್ನು ವೀಕ್ಷಿಸಿ, ಜಾತ್ರಾ ಸಮಿತಿಯ ಪ್ರಮುಖರೊಂದಿಗೆ ಚರ್ಚಿಸಿದರು.
ಈ ವೇಳೆ ಮಾತನಾಡಿದ ಭೀಮಣ್ಣ, ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಕುಡಿಯುವ ನೀರು, ಸ್ವಚ್ಛತೆ ಮತ್ತು ಶೌಚಗೃಹದ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಜಾತ್ರೆಯ ಅವಧಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಹಾಗೂ ಭದ್ರತೆಯ ದೃಷ್ಟಿಯಿಂದ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಲಾಗಿದೆ.
ಮಾರಿಕಾಂಬಾ ಜಾತ್ರೆಯು ನಮ್ಮ ಹೆಮ್ಮೆ. ಈ ಸಂಭ್ರಮವು ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಯಲು ಪ್ರತಿಯೊಬ್ಬ ನಾಗರಿಕರು ಹಾಗೂ ಭಕ್ತರು ಸಹಕರಿಸಬೇಕು ಎಂದರು.
ಬಾಬುದಾರ ಮುಖ್ಯಸ್ಥ ಜಗದೀಶ ಗೌಡ, ಡಿವೈಎಸ್ಪಿ ಗೀತಾ ಪಾಟೀಲ, ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಜಾತ್ರಾ ಸಮಿತಿಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net