ಸಹಕಾರಿಗೆ ಸಿಗಲಿ ಯುವಸ್ಪರ್ಶ

ಶಿರಸಿಯಲ್ಲಿ ಆಯೋಜಿಸಿದ್ದ ಸಹಕಾರಿ ಸಪ್ತಾಹದಲ್ಲಿ ಶಿರಸಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಜಯದೇವ ನೀಲೇಕಣಿ ಅವರನ್ನು ಸನ್ಮಾನಿಸಲಾಯಿತು. ಜಿ.ಟಿ. ಹೆಗಡೆ, ಗೋಪಾಲಕೃಷ್ಣ ವೈದ್ಯ, ಸುರೇಶ್ಚಂದ್ರ ಹೆಗಡೆ, ಭಾಸ್ಕರ ಹೆಗಡೆ ಕಾಗೇರಿ, ವಿಶ್ವಾಸ ಬಲ್ಸೆ ಇತರರಿದ್ದರು.
ಶಿರಸಿಯಲ್ಲಿ ಆಯೋಜಿಸಿದ್ದ ಸಹಕಾರಿ ಸಪ್ತಾಹದಲ್ಲಿ ಶಿರಸಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಜಯದೇವ ನೀಲೇಕಣಿ ಅವರನ್ನು ಸನ್ಮಾನಿಸಲಾಯಿತು. ಜಿ.ಟಿ. ಹೆಗಡೆ, ಗೋಪಾಲಕೃಷ್ಣ ವೈದ್ಯ, ಸುರೇಶ್ಚಂದ್ರ ಹೆಗಡೆ, ಭಾಸ್ಕರ ಹೆಗಡೆ ಕಾಗೇರಿ, ವಿಶ್ವಾಸ ಬಲ್ಸೆ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಹಕಾರಿ ಜಿ.ಟಿ. ಹೆಗಡೆ ತಟ್ಟಿಸರ ಅಭಿಪ್ರಾಯ
  • ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನೆ
  • ವಿದ್ಯಾರ್ಥಿ ಘಟ್ಟದಿಂದಲೇ ಸಹಕಾರಿ ತತ್ವಗಳ ಮನವರಿಕೆ ಆಗಲಿ
ಶಿರಸಿ: ಮಕ್ಕಳಿಗೆ ಸಹಕಾರಿ ವ್ಯವಸ್ಥೆಯ ಬಗ್ಗೆ ತಿಳಿವಳಿಕೆ ನೀಡುವ ಅವಶ್ಯಕತೆ ಇದೆ. ಪಠ್ಯಪುಸ್ತಕಗಳಲ್ಲಿ ಸಹಕಾರಿ ವಿಷಯದ ಬಗ್ಗೆ ಒಂದು ಪಾಠವನ್ನು ಇಡಬೇಕು. ಇದರಿಂದ ಯುವಕರು ಸಹಕಾರಿ ಕ್ಷೇತ್ರದಲ್ಲಿ (Co-operative sector) ಹೊಸ ಆಯಾಮ ನಿರ್ಮಿಸಲು ಸಾಧ್ಯ ಎಂದು ಟಿಎಂಎಸ್ ಸಂಸ್ಥೆಯ ಅಧ್ಯಕ್ಷ, ಹಿರಿಯ ಸಹಕಾರಿ ಜಿ.ಟಿ. ಹೆಗಡೆ ತಟ್ಟಿಸರ ಹೇಳಿದರು.
ನಗರದ ಟಿಆರ್‌ಸಿ ಸೊಸೈಟಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉತ್ತರ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಕುಮಟಾ, ಕೆಡಿಸಿಸಿ ಬ್ಯಾಂಕ್, ಸಹಕಾರ ಇಲಾಖೆ, ತೋಟಗಾರ್ಸ್ ರೂರಲ್ ಕೋ ಆಫ್ ಅಗ್ರಿಕಲ್ಚರಲ್ ಮಲ್ಟಿಪರ್ಸಸ್ ಸೊಸೈಟಿ ಶಿರಸಿ ಹಾಗೂ ಶಿರಸಿ ತಾಲೂಕಿನ ಸಹಕಾರ ಸಂಘಗಳ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಘಟ್ಟದಿಂದಲೇ ಸಹಕಾರಿ ತತ್ವಗಳ ಮನವರಿಕೆ ಆಗಬೇಕು ಎಂದರು.
ಸಹಕಾರಿ ಕಾಯ್ದೆ ಕಾನೂನು ಮೇಲೆ ನಿರಂತರವಾಗಿ ಹಸ್ತಕ್ಷೇಪ ನಡೆಯುತ್ತಿದೆ. ನ್ಯಾಯಾಲಯಗಳಿಗೆ ಹೋಗುವ ಸಂಖ್ಯೆ ಕಡಿಮೆ ಯಾಗಬೇಕು. ಸಹಕಾರಿ ಸಂಘಗಳ ಬಲವರ್ಧನೆಗೆ ಹೆಚ್ಚಿನ ಗಮನ ಕೊಡಬೇಕು ಎಂದರು.
ಧಾರವಾಡ ಹಾಲು ಒಕ್ಕೂಟದ ಪ್ರಭಾರಿ ಅಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಮಾತನಾಡಿ, ಹಿರಿಯರ ಭಾವನೆಗಳಿಗೆ ಸ್ಪಂದಿಸಿ ಸಹಕಾರ ವ್ಯವಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಟಿಎಸ್‌ಎಸ್ ಸೊಸೈಟಿ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮಾತನಾಡಿ, ಸಹಕಾರಿ ಕ್ಷೇತ್ರ ಯಾರ ಕಪಿಮುಷ್ಠಿಯಲ್ಲಿ ಸಿಲುಕಿ ಒದ್ದಾಡುತ್ತಿದೆ ಎಂದು ತಿಳಿಯುತ್ತಿಲ್ಲ. ಸಹಕಾರಿ ಕ್ಷೇತ್ರದ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ. ಜಿಲ್ಲೆಯ ಕೆಲವು ಸಹಕಾರಿ ಸಂಘಗಳಲ್ಲಿ ಸಾಕಷ್ಟು ಅವ್ಯವಹಾರಗಳು ನಡೆಯುತ್ತಿದೆ. ನಾವು ಪ್ರಶ್ನೆಮಾಡದಿರುವುದೇ ಇದಕ್ಕೆ ಕಾರಣ. ಸಹಕಾರ ಕ್ಷೇತ್ರ ಬಡವಾಗದಂತೆ ನಾವು ನೋಡಿಕೊಳ್ಳಬೇಕು ಎಂದರು
.
ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ, ಟಿಆರ್‌ಸಿ ಸೊಸೈಟಿ ಉಪಾಧ್ಯಕ್ಷ ವಿಶ್ವಾಸ ಬಲ್ಸೆ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳಿ ನಿರ್ದೇಶಕ ಶ್ರೀಪಾದ ಹೆಗಡೆ ಕಡವೆ, ಶ್ರೀಪಾದ ರಾಯ್ಸದ್ ಮಾತನಾಡಿದರು. ಸಹಕಾರ ಸಂಘಗಳ ಸಹಾಯಕ ನಿಬಂಧಕ ಅಜಿತ ಶಿರಹಟ್ಟಿ ಉಪನ್ಯಾಸ ನೀಡಿದರು.
ಕದಂಬ ಮಾರ್ಕೆಟಿಂಗ್ ಸಹಕಾರ ಸಂಘದ ಅಧ್ಯಕ್ಷ ಶಂಭುಲಿಂಗ ಹೆಗಡೆ ಇದ್ದರು. ಯೂನಿಯನ್ ನಿರ್ದೇಶಕ ಮಹೇಂದ್ರ ಭಟ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸನ್ಮಾನ: ಇದೇ ವೇಳೆ ಸಹಕಾರಿ ಕ್ಷೇತ್ರದಲ್ಲಿ ಸಾಧನೆಗೈದ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಬಸವೇಶ್ವರ ಸಹಕಾರಿ ಸೇವಾ ಸಂಘಕ್ಕೆ ನೀಡಿ ಗೌರವಿಸಲಾಯಿತು. ಉತ್ತಮ ಸಹಕಾರಿ ಪ್ರಶಸ್ತಿಯನ್ನು ಅರ್ಬನ್ ಬ್ಯಾಂಕ್ ಅಧ್ಯಕ್ಷ ಜಯದೇವ ನಿಲೇಕಣಿ ಅವರಿಗೆ ನೀಡಿ ಗೌರವಿಸಲಾಯಿತು.
ಉತ್ತಮ ಸಹಕಾರಿ ನೌಕರ ಪ್ರಶಸ್ತಿಯನ್ನು ಎಸ್.ಎನ್. ಹೆಗಡೆ ದೊಡ್ನಳ್ಳಿ ಅವರಿಗೆ ನೀಡಿ ಗೌರವಿಸಲಾಯಿತು. ಎನ್.ಪಿ. ಗಾಂವ್ಕರ್ ದತ್ತಿನಿಧಿ ಪ್ರಶಸ್ತಿಯನ್ನು ಹುಳಗೋಳ ಸೇವಾ ಸಹಕಾರಿ ಸಂಘ ಭೈರುಂಬೆಯ ಮುಖ್ಯ ಕಾರ್ಯನಿರ್ವಾಹಕ ಜಿ. ಎಂ. ಹೆಗಡೆ ಮಾತ್ನಳ್ಳಿ ಅವರಿಗೆ ನೀಡಿ ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net