ಅಲ್ಪಸಂಖ್ಯಾತ ಮಕ್ಕಳು ಶಾಲೆ ಬಿಡದಂತೆ ನೋಡಿಕೊಳ್ಳಿ

ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್‌ ಅಹಮದ್‌ ಸಭೆ ನಡೆಸಿದರು.
ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್‌ ಅಹಮದ್‌ ಸಭೆ ನಡೆಸಿದರು.
Published on
ಕಾರವಾರ:
ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿರುವ ಕಾರ್ಯಕ್ರಮಗಳ
ಸಂಪೂರ್ಣ ಪ್ರಯೋಜನವನ್ನು ಅಲ್ಪಸಂಖ್ಯಾತ ಸಮುದಾಯದ ಜನತೆಗೆ ಸಮರ್ಪಕವಾಗಿ ತಲುಪಿಸುವಂತೆ ಕರ್ನಾಟಕ ರಾಜ್ಯ ಅಲ್ಪ
ಸಂಖ್ಯಾತರ ಅಯೋಗದ ಅಧ್ಯಕ್ಷ .ನಿಸಾರ್ ಅಹಮದ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಅಲ್ಪ ಸಂಖ್ಯಾತ ಸಮುದಾಯಗಳಾದ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯ ಶಿಕ್ಷಣ ಪಡೆಯುವ ಕುರಿತಂತೆ
ಮತ್ತು ಶಾಲೆಯಿಂದ ಹೊರಗುಳಿಯದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು
ನಿರಂತರವಾಗಿ ಪರಿಶೀಲನೆ ನಡೆಸಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದAತೆ ಎಚ್ಚರವಹಿಸಬೇಕು. ಅಲ್ಪ ಸಂಖ್ಯಾತ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಕಳೆದ 10 ವರ್ಷಗಳ ವಿದ್ಯಾರ್ಥಿಗಳ ದಾಖಲಾತಿ, ಶಾಲೆ ಬಿಟ್ಟವರ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದವರ ವಿವರಗಳನ್ನೊಳಗೊಂಡ ವರದಿಯನ್ನು 10 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶನ ನೀಡಿದರು.
ಬ್ಯಾಂಕ್ ಗಳಲ್ಲಿ ಶೈಕ್ಷಣಿಕ ಸಾಲ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ 7.5 ಲಕ್ಷದವರೆಗೆ ಭದ್ರತೆ ಇಲ್ಲದೆ ಸಾಲ ನೀಡುತ್ತಿದ್ದು,
ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವಂತಾಗಬೇಕು ಎಂದ ಅವರು, ಬ್ಯಾಂಕ್ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶೈಕ್ಷಣಿಕ ಸಾಲ ಮಂಜೂರು ಮಾಡುವಂತೆ ಲೀಡ್ ಬ್ಯಾಂಕ್ ಅಧಿಕಾರಿಗೆ ಸೂಚಿಸಿದದರು.
ನಗರ ಸ್ಥಳೀಯ ಸಂಸ್ಥೆಯ ಜನ ಕಲ್ಯಾಣ ಯೋಜನೆಗಳಲ್ಲಿ ಶೇ.15% ರಷ್ಟು ಮೊತ್ತವನ್ನು ಅಲ್ಪ ಸಂಖ್ಯಾತ ಸಮುದಾಯದ
ಅಭಿವೃದ್ದಿಗೆ ವೆಚ್ಚ ಮಾಡುವಂತೆ ಆದೇಶವಿದ್ದು, ಇದನ್ನು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ ಅವರು , ಭಟ್ಕಳದಲ್ಲಿನ ಒಳಚರಂಡಿ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲಿ ಸೂಕ್ತ ಪರಿಹಾರ ಒದಗಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಲ್ಪ ಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ಕಾರ್ಮಿಕ ಇಲಾಖೆಯಿಂದ ಶಿಬಿರಗಳನ್ನು
ಆಯೋಜಿಸಿ, ಇಲಾಖೆಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ದೊರಕಿಸುವಂತೆ ಸೂಚನೆ ನೀಡಿದ ಅವರು, ಒಂದು ವಾರದ ಒಳಗೆ ಭಟ್ಕಳದಲ್ಲಿ ಶಿಬಿರವನ್ನು ಅಯೋಜಿಸಿ ವರದಿ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಸಿಇಓ ಡಾ.ದಿಲೀಶ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್, ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸತೀಶ್ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನದ ನಾಮನಿರ್ದೇಶಿತ ಸದಸ್ಯರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net