ಮಿಶ್ರ ಬೇಸಾಯ ಪದ್ಧತಿಯಿಂದ ಹೆಚ್ಚಿನ ಲಾಭ ಸಾಧ್ಯ Mixed farming

ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ರೈತ ದಿನಾಚರಣೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ರೈತ ದಿನಾಚರಣೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.
Published on
ಶಿರಸಿ: ಏಕಮುಖ ಬೆಳೆಯಿಂದ ಮಾರುಕಟ್ಟೆ ಸೌಲಭ್ಯ ಕೊರತೆಯಾಗುತ್ತದೆ. ರೈತರು ಮಿಶ್ರ ಬೆಳೆ ಪದ್ಧತಿ (Mixed farming) ಅಳವಡಿಸಿಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಸಲಹೆ ನೀಡಿದರು.
ನಗರದ ಅರಣ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ರೈತ ದಿನಾಚರಣೆಯನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಆಯ್ಕೆಯಾದ ರೈತರನ್ನು ಸನ್ಮಾನಿಸಿ ಅವರು ಮಾತನಾಡಿದರು.
ರೈತರು ವೈಜ್ಞಾನಿಕ ತಳಹದಿಯಲ್ಲಿ ಕೃಷಿ ಕಾರ್ಯನಿರ್ವಹಿಸಿದರೆ ಉತ್ತಮ ಆದಾಯ ನಿರೀಕ್ಷಿಸಬಹುದು.ಇತ್ತೀಚಿನ ವರ್ಷಗಳಲ್ಲಿ ಆಹಾರ ವಿಷಪೂರಿತವಾಗಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದ್ದು, ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಉದ್ಯೋಗದ ಭರವಸೆ ಅತಿ ಅವಶ್ಯವಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯಲ್ಲಿ 100 ದಿನ ಕೆಲಸ ಇರುವುದನ್ನು 120 ದಿನ ಮಾಡಲಾಗಿದ್ದು, ಒಂದು ವಾರದಲ್ಲಿ ಹಣ ಪಾವತಿಗೆ ಅವಕಾಶವಿದೆ.
ಪರಿಷ್ಕರಣೆಯ ಹೆಸರಿನಲ್ಲಿ ದರ ಕಡಿಮೆ ಮಾಡಬಾರದು. ಏರಿಕೆ ಮಾಡಬೇಕು ಎಂಬ ಬಿಲ್‌ನ್ನು ಕೇಂದ್ರಸರ್ಕಾರ ಅಧಿವೇಶನದಲ್ಲಿ ಪಾಸ್ ಮಾಡಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಕೃಷಿಕ ಸಮಾಜದ ಅಧ್ಯಕ್ಷ ಜಿ.ಆರ್.ಹೆಗಡೆ ಬೆಳ್ಳೆಕೇರಿ ಅಧ್ಯಕ್ಷತೆ ವಹಿಸಿದ್ದರು.
2025-26ನೇ ಸಾಲಿನ ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ ಅಳವಡಿಸಿಕೊಂಡಿರುವ ಮಹಾಬಲೇಶ್ವರ ಗೌಡ ಕಬ್ಬೆ, ಆನಂದ ಹೆಗಡೆ ಹುಳಗೋಳ, ಪ್ರವೀಣ ಹೆಗಡೆ ಬಕ್ಕಳ, ಕನ್ನ ಬಡಗಿ ತೆಪ್ಪಾರ, ಗಣಪತಿ ಹೆಗಡೆ ಸದಾಶಿವಳ್ಳಿ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವಿಕಸಿತ ಭಾರತ 2047 ಹಸ್ತ ಪ್ರತಿಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಇತರ ಗಣ್ಯರು ಬಿಡುಗಡೆಗೊಳಿಸಿದರು.
ಆತ್ಮ ಸಮಿತಿಯ ಅಧ್ಯಕ್ಷ ದುಶ್ಯಂತರಾಜ ಕೊಲ್ಲೂರಿ, ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ವಾಸುದೇವ, ಕೆವಿಕೆ ಮುಖ್ಯಸ್ಥೆ ಡಾ.ರೂಪಾ ಪಾಟೀಲ, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಆರ್.ಡಿ.ಹೆಗಡೆ ಜಾನ್ಮನೆ ಮತ್ತಿತರರು ಉಪಸ್ಥಿತರಿದ್ದರು.
ಕೃಷಿ ಇಲಾಖೆಯ ಉಪನಿರ್ದೇಶಕ ಪಿ.ಕೆ.ಪಾಂಡು ಪ್ರಾಸ್ತಾವಿಕ ಮಾತನಾಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಧುಕರ ನಾಯ್ಕ ಸ್ವಾಗತಿಸಿದರು. ಕೃಷಿ ಅಧಿಕಾರಿ ವಿವೇಕ ಹೆಗಡೆ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net