ಈ ಅಣಕು ಕಾರ್ಯಚರಣೆಯಲ್ಲಿ ಜಿ. ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠ್ಟಾಧಿಕಾರಿ ದೀಪನ್ ಎಂ.ಎನ್, ಡಿ.ಎಫ್.ಓ ರವಿಶಂಕರ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ತರಬೇತಿ ನಿರತ ಐ.ಎ.ಎಸ್. ಅಧಿಕಾರಿ ಜೂಫಿಶಾನ್ ಹಕ್, ಎನ್.ಡಿ.ಆರ್.ಎಫ್., ಕೋಸ್ಟ್ ಗಾರ್ಡ್, ಸಿ.ಎಸ್.ಎಸ್.ಎಫ್, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ, ಕಂದಾಯ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಕೈಗಾದ ಅಧಿಕಾರಿಗಳು ಭಾಗವಹಿಸಿದ್ದರು.