ಯಲ್ಲಾಪುರ: ಯುವಕನೊಬ್ಬ ಮಹಿಳೆಯ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ನಡೆದಿದೆ.
ಕಾಳಮ್ಮನಗರದ ರಂಜಿತಾ ಮಲ್ಲಪ್ಪ ಬನ್ಸೋಡೆ (31) ಕೊಲೆಯಾದ ಮಹಿಳೆ. ಶನಿವಾರ ಮಧ್ಯಾಹ್ನದ ವೇಳೆಗೆ ಕಾಳಮ್ಮ ನಗರದ ರಫೀಕ್ ಯಳ್ಳೂರ ಎಂಬಾತ ಈಕೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.
ಗಾಯಗೊಂಡ ಮಹಿಳೆಯನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾರೆ.
ಈ ಕೊಲೆಗೆ ಕಾರಣ ಏನೆಂಬುದು ತಿಳಿದು ಬರಬೇಕಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ನಾಪತ್ತೆಯಾದ ರಫೀಕ್ ಗಾಗಿ ಶೋಧ ನಡೆಸುತ್ತಿದ್ದಾರೆ.