ಬಳಿಕ ಮಾತನಾಡಿದ ಅವರು, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ಆಸ್ತಿ ರಕ್ಷಿಸಲು ಆಧುನಿಕ ತಂತ್ರಜ್ಞಾನದ ವಾಹನಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಸರ್ಕಾರವು ಶಿರಸಿ ತಾಲೂಕಿಗೆ ಹೊಸ ವಾಹನ ಒದಗಿಸಿರುವುದು ಶ್ಲಾಘನೀಯ. ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುತ್ತಿದ್ದಾರೆ. ಹೊಸ ವಾಹನದ ಸೇರ್ಪಡೆಯಿಂದ ಕಾರ್ಯಾಚರಣೆ ಇನ್ನಷ್ಟು ವೇಗವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲಿದೆ ಎಂದರು. ಎಸ್.ಕೆ. ಭಾಗ್ವತ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ತಹಸೀಲ್ದಾರ್ ಪಟ್ಟರಾಜ ಗೌಡ ಇತರರಿದ್ದರು.