ಪೊಲೀಸ್‌ ಪರೀಕ್ಷಾ ಕೇಂದ್ರ ಪ್ರವೇಶಿಸಲು ಎಐ ಗುರುತಿನ ವ್ಯವಸ್ಥೆ

ಪೊಲೀಸ್‌ ಪರೀಕ್ಷೆ ಸಂಬಂಧ ಡಿಸಿ ಸಭೆ ನಡೆಸಿದರು.
ಪೊಲೀಸ್‌ ಪರೀಕ್ಷೆ ಸಂಬಂಧ ಡಿಸಿ ಸಭೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಆಗಸ್ಟ್‌ 2 ರಂದು ಸಿವಿಲ್‌ ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆ
  • ಜನಿವಾರ, ಶಿವದಾರಕ್ಕೆ ಇಲ್ಲ ತೊಂದರೆ
  • ಉದ್ದ ತೋಳಿನ ಶರ್ಟ್‌, ಶೂ ಧರಿಸಲು ನಿಷೇಧ
ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷೆಯು ಆಗಸ್ಟ್ 2 ರಂದು ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕಾರವಾರದ 15 ಹಾಗೂ ಅಂಕೋಲಾದ 5 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಒಟ್ಟು 6,475 ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.

ಎಐ ಗುರುತಿನ ವ್ಯವಸ್ಥೆ:

ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿ, ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಪರೀಕ್ಷಾ ಕೇಂದ್ರದೊಳಗೆ ತೆರಳಲು ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗುತ್ತಿದ್ದು, ಜಿಪಂ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದರು.

ಡ್ರೆಸ್ ಕೋಡ್:

ಅಭ್ಯರ್ಥಿಗಳು ಪರೀಕ್ಷೆ ಆರಂಭದ ಕನಿಷ್ಠ 2 ಗಂಟೆಗಳ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು,ಸೂಕ್ತ ಗುರುತಿನ ಚೀಟಿ ಹೊಂದಿರಬೇಕು ಎಂದರು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ತಪಾಸಣಾ ಕೊಠಡಿ ಇರಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು ಎಂದರು.
ಪರೀಕ್ಷಾ ಪ್ರಾಽಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್‌ಕೋಡ್ ಮತ್ತು ನಿಷೇಽತ ವಸ್ತುಗಳ ಪರಿಶೀಲನೆ ನಡೆಸಬೇಕು. ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‌ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮರಾ, ಮೈಕ್ರೋಚಿಪ್ ಸೇರಿದಂತೆ ಯಾವುದೇ ಗುಪ್ತ ಎಲೆಕ್ಟ್ರಾನಿಕ್ ಸಾಧನಗಳನ್ನು ಕೇಂದ್ರದೊಳಗೆ ನಿಷೇಧಿಸಲಾಗಿದೆ ಎಂದರು.
ಮಾತ್ರವಲ್ಲ ಆಹಾರ ಪದಾರ್ಥಗಳು ಹಾಗೂ ನೀರಿನ ಬಾಟಲಿಯನ್ನೂ ಕೂಡಾ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ. ಪೂರ್ಣ ತೋಳಿನ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಆದರೆ ಮೂಗುತಿ ಹಾಗೂ ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ಬೂಟುಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ ಎಂದರು.
ಎಸ್‌ಪಿ ದೀಪನ್ ಎಂ.ಎನ್. ಮಾತನಾಡಿ, ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಽಕಾರಿಗಳಿಗೂ ಪ್ರವೇಶವಿಲ್ಲ. ಪರೀಕ್ಷಾ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲ ವಾಹನಗಳ ವಿವರ ದಾಖಲಿಸುವ ಲಾಗ್ ಮಾಹಿತಿ ಇಡಬೇಕು. ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ನಿಗಾ ವಹಿಸಬೇಕು ಎಂದರು. ಅಪರ ಜಿಲ್ಲಾಽಕಾರಿ ಸಾಜಿದ್ ಮುಲ್ಲಾ, ಎಎಸ್‌ಪಿ ಕೃಷ್ಣಮೂರ್ತಿ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net