ಕಾರವಾರ: ಕದಂಬ ಔಕಾನೆಲೆಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಎನ್ಎಸ್ ವಾಗ್ಶೀರ್ ಎಂಬ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದರು.
ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.
ಅವರು ಮಧ್ಯಾಹ್ನದವರೆಗೆ ಅರಬ್ಬಿ ಸಮುದ್ರದಲ್ಲಿ ಸಂಚರಿಸಿ(ಸೀ ಸೋರ್ಟಿ) ಸಾಗರ ಗಡಿ ಭದ್ರತೆಯ ಮಾಹಿತಿ ಪಡೆಯುವರು.
ಗೋವಾದಿಂದ ಹೆಲಿಕಾಪ್ಟರ್ ನಲ್ಲಿ ಬಂದು ಇಳಿದ ಅವರನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ವಾಗತಿಸಿದರು.
ನೌಕಾಸೇನೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ, ಕರ್ನಾಟಕ ನೌಕಾ ವಲಯ ಮುಖ್ಯಸ್ಥ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಎಡಿಜಿಪಿ ಹಿತೇಂದ್ರ ಐಜಿಪಿ ಅಮಿತ್ ಸಿಂಗ್ ಇ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಇದ್ದರು.