ಬಳಿಕ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಊಟ, ಉಪಹಾರದ ಗುಣಮಟ್ಟ ಕುರಿತು ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದರು. ನಿಲಯದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದ ಅವರು, ವಿದ್ಯಾರ್ಥಿನಿಯರು ಯಾವುದೇ ಭಯ ಅಥವಾ ಮುಜುಗರವಿಲ್ಲದೇ ಓದಿನ ಕಡೆ ಗಮನಹರಿಸಬೇಕು. ಹಾಸ್ಟೆಲ್‌ನಲ್ಲಿ ಏನಾದರೂ ಸಮಸ್ಯೆಗಳಿದ್ದರೆ ತಕ್ಷಣವೇ ವಾರ್ಡನ್ ಅಥವಾ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು.