Livestock ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ Livestock ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವುದು.
ಅಕ್ರಮವಾಗಿ ಸಾಗಿಸುತ್ತಿದ್ದ Livestock ಜಾನುವಾರುಗಳನ್ನು ಪೊಲೀಸರು ರಕ್ಷಿಸಿರುವುದು.
Published on
ಭಟ್ಕಳ: ಬಕ್ರೀದ್ ಹಬ್ಬದ ಹಿನ್ನೆಲೆ ಅಕ್ರಮವಾಗಿ ಜಾನುವಾರು Livestock ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ 11 ಜಾನುವಾರುಗಳನ್ನು ರಕ್ಷಿಸಿದ ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಅಂದಾಜು 1.40 ಲಕ್ಷ ರೂ.ಮೌಲ್ಯದ 14 ಜಾನುವಾರುಗಳನ್ನು ಇನ್ಸುಲೇಟರ್ ವಾಹನದಲ್ಲಿ ಹಿಂಸಾತ್ಮಕವಾಗಿ ಹಗ್ಗಗಳಿಂದ ಕಟ್ಟಿ, ಒಂದರ ಮೇಲೊಂದು ತುಂಬಿಕೊಂಡು ಯಾವುದೇ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಗುರುವಾರ ಬೆಳಗಿನ ಜಾವ 4.50ರ ಸುಮಾರಿಗೆ ಜಾಲಿ ಕ್ರಾಸ್ ಬಳಿ ಪೊಲೀಸರು ವಾಹನ ತಡೆದು ನಿಲ್ಲಿಸಲು ಸೂಚಿಸಿದರೂ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಡೊಂಗರಪಳ್ಳಿ ಸಮೀಪದ ಖುಲ್ಲಾ ಜಾಗದಲ್ಲಿ ವಾಹನ ಬಿಟ್ಟು ಆರೋಪಿತರು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಾಹನದಲ್ಲಿದ್ದ ಜಾನುವಾರುಗಳಲ್ಲಿ ಒಂದು ಕೋಣ, ಒಂದು ಎಮ್ಮೆ ಹಾಗೂ ಒಂದು ಎತ್ತು ಉಸಿರುಗಟ್ಟಿ ಮೃತಪಟ್ಟಿದ್ದು, ಉಳಿದ 11 ಜಾನುವಾರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.
ನಗರ ಠಾಣೆ ಪಿಎಸ್‌ಐ ತಿಮ್ಮಪ್ಪ ಎಸ್. ದೂರು ನೀಡಿದ್ದು, ಪಿಎಸೈ ನವೀನ್ ನಾಯ್ಕ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net