ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ ಹೋಲ್ ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸದೇ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಬಳಸಬೇಕು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದAದು ವೇತನ ಪಾವತಿಯಾಗಬೇಕು. ಇಎಸ್‌ಐ ಮತ್ತು ಇಪಿಎಫ್ ನಿಗದಿತವಾಗಿ ಕಡಿತವಾಗುತ್ತಿರುವ ಬಗ್ಗೆ ಕಾರ್ಮಿಕ ಇಲಾಖೆ ಅಽಕಾರಿಗಳು ಪರಿಶೀಲಿಸಬೇಕು. ಕರ್ತವ್ಯ ಸಮಯದಲ್ಲಿ ಸುರಕ್ಷಾ ಪರಿಕರಗಳನ್ನು ತಪ್ಪದೇ ಬಳಸುವ ಕುರಿತಂತೆ ಪೌರ ಕಾರ್ಮಿಕರಿಗೆ ನಿರ್ದೇಶನ ನೀಡಬೇಕು.ಅವರಿಗೆ ನಿಗದಿತ ಸಮಯದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕಪ್ ಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು. ಜಿಪಂ ಸಿಇಒ ಡಾ.ದಿಲೀಶ್ ಶಶಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಇದ್ದರು.