ಜನ ಸಂತಸದಿಂದಿರುವುದೇ ನಿಜವಾದ ಅಭಿವೃದ್ಧಿ Development

ಕೆಳಗಿನೂರಿನ ಒಕ್ಕಲಿಗರ ಸಭಾಭವನದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯಉದ್ಘಾಟಿಸಿದರು.
ಕೆಳಗಿನೂರಿನ ಒಕ್ಕಲಿಗರ ಸಭಾಭವನದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯಉದ್ಘಾಟಿಸಿದರು.
Published on
ಹೊನ್ನಾವರ: ಸಾಮಾನ್ಯ ಜನರು ಸಂತೋಷವಾಗಿರುವುದೇ ಅಭಿವೃದ್ಧಿ. ಗ್ಯಾರಂಟಿಯೊಂದಿಗೆ ಅಭಿವೃದ್ಧಿ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಕೆಳಗಿನೂರಿನ ಒಕ್ಕಲಿಗರ ಸಭಾಭವನದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಗ್ಯಾರಂಟಿ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಈ ಗ್ಯಾರಂಟಿ ಯೋಜನೆಯಲ್ಲಿ ನಂಬಿಕೆ ಇಡಬೇಡಿ ಎಂದು ಬಿಜೆಪಿ ಹೇಳಿತ್ತು, ಆದರೆ ರಾಜ್ಯದ ಜನರು ಕಾಂಗ್ರೆಸ್‌ಅನ್ನು ಗೆಲ್ಲಿಸಿದರು. ಗ್ಯಾರಂಟಿ ಮೂಲಕ ನಾವು 50 ಸಾವಿರ ಕೋಟಿ ರೂ. ಜನರಿಗೆ ನೀಡಿದ್ದೇವೆ. ಈ ಯೋಜನೆಯಿಂದ ಹಲವು ಪ್ರಯೋಜನಗಳಿವೆ.
ಎಲ್ಲರೂ ಸಮೃದ್ಧರಾಗಿದ್ದರೆ, ಅದನ್ನು ಅಭಿವೃದ್ಧಿ ಎಂದು ಹೇಳಬಹುದು. ಜನರು ಸ್ವಾಭಿಮಾನದಿಂದ ಬದುಕಬೇಕೆಂದು ಈ ಗ್ಯಾರಂಟಿ ಯೋಜನೆಯನ್ನು ನೀಡಲಾಯಿತು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಮಾತನಾಡಿ ಐದು ಗ್ಯಾರಂಟಿ ಯೋಜನೆ ಜನರನ್ನು ತಲುಪಿದೆಯೇ ಎಂದು ಪರಿಶೀಲಿಸುವ ಕೆಲಸವನ್ನು ನನಗೆ ನೀಡಲಾಗಿದೆ. ಅದರಂತೆ, ನಾವು ಕಾರ್ಯಾಗಾರವನ್ನು ನಡೆಸಿದ್ದೇವೆ.
ಜನರಿಗಾಗಿ ಕೆಲಸ ಮಾಡಿದ ಯಾವುದೇ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಸರ್ಕಾರ. ನಾವು ಜನರ ಜೀವನಕ್ಕಾಗಿ ಕೆಲಸ ಮಾಡುತ್ತೇವೆ, ನಾವು ಜನರ ಭಾವನೆಗಳೊಂದಿಗೆ ಕೆಲಸ ಮಾಡುದಿಲ್ಲ ಎಂದರು.
ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ್ ಬ್ಯಾಡಗಿ ಮತ್ತು ಡಾ. ಪುಷ್ಪಾ ಅಮರನಾಥ ಮಾತನಾಡಿದರು.
ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಷ್ ಶಸಿ ಸ್ವಾಗತಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಪ್ರಾಸ್ತವಿಕ ಮಾತನಾಡಿದರು.
ಗ್ಯಾರಂಟಿ ಜಾಗೃತಿ ಅನುಷ್ಠಾನದ ಸದಸ್ಯ ಮೋಹನ ಉಪನ್ಯಾಸ ನೀಡಿದರು.
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net