ಭ್ರೂಣ ಲಿಂಗ ಪತ್ತೆ ಮಾಡುವವರ ಮಾಹಿತಿ ನೀಡಿದರೆ 1 ಲಕ್ಷ ರೂ. ಬಹುಮಾನ
ಡಿಎಚ್‌ಒ ಕಚೇರಿಯಲ್ಲಿ ಹೆಣ್ಣು ಮಗುವಿನ ದಿನ ಆಚರಿಸಲಾಯಿತು
Published on:
Copied
Follow Us
ಕಾರವಾರ: ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಲಿಂಗ ತಾರತಮ್ಯವನ್ನು ಹೋಗಲಾಡಿಸಲು ರಾಷ್ಟ್ರಿಯ ಹೆಣ್ಣು ಮಗುವಿನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭ್ರ‍್ರೂಣ ಲಿಂಗ ಪತ್ತೆ ಪ್ರಕರಣ ಕುರಿತು ಮಾಹಿತಿಯನ್ನು
ನೀಡಿದ್ದಲ್ಲಿ ಸರ್ಕಾರದಿಂದ ಒಂದು ಲಕ್ಷ ಬಹುಮಾನ ನೀಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ.ಶಂಕರ್ ರಾವ್ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನಡೆದ, ರಾಷ್ಟ್ರಿಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶದ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ಮತ್ತು ಸ್ಥಾನಮಾನ ಇದೆ. ಹೆಣ್ಣು ಮಗುವನ್ನು,
ಮನೆಯನ್ನು ಬೆಳಗುವ ದೀಪ ಎಂದು ಕರೆಯುವ ಅದೇ ಜನ ಮನೆಯಲ್ಲಿ ಹೆಣ್ಣು ಹುಟ್ಟಿದರೆ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳದಂತೆ ನಾವೆಲ್ಲರೂ ನೋಡಿಕೊಳ್ಳಬೇಕು ಎಂದರು.
ತೋಡುರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ರಾಹುಲ್ ಎಸ್. , ಸಹಾಯಕ ಆಡಳಿತಾಧಿಕಾರಿ ಯೂಸುಫ್ ಖಾನ್,
ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿ ಬಸವರಾಜ್ ಕನ್ನಕ್ಕನವರ, ನರ್ಸಿಂಗ್ ಅಫೀಸರ್ ಸುಷ್ಮ್ಮಾ, ಸಂಧ್ಯಾ ಹಾಗೂ ಕಾರವಾರ
ತಾಲೂಕಿನ ಆಶಾ ಕಾರ್ಯಕರ್ತೆಯರು ಮತ್ತು ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು. ರತೀಶ್ ನಾಯ್ಕ ಸ್ವಾಗತಿಸಿ, ವಂದಿಸಿದರು.