ಮೃತರಿಗೆ ಪಾವತಿಯಾಗಿದ್ದ 12.37 ಲಕ್ಷ ರೂ. ಗೃಹಲಕ್ಷ್ಮೀ ಹಣ ಸರ್ಕಾರಕ್ಕೆ ವಾಪಸ್‌

ಜಿಲ್ಲಾ ಗ್ಯಾರಂಟಿ ಸಮಿತಿ ಸಭೆ ನಡೆಯಿತು.
ಜಿಲ್ಲಾ ಗ್ಯಾರಂಟಿ ಸಮಿತಿ ಸಭೆ ನಡೆಯಿತು.
Published on

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಿದ್ದ 12.37 ಲಕ್ಷ ರೂ.ಗಳನ್ನು ಸರ್ಕಾರಕ್ಕೆ ಮರು ಭರಣ ಮಾಡಲಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಿ. ನಾಯ್ಕ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಮೃತರ ಖಾತೆಗಳಿಗೆ ಜಮಾ ಆದ ಮೊತ್ತವು ಇನ್ನೂ ಹೆಚ್ಚಿರುವ ಸಾಧ್ಯತೆಗಳಿವೆ. ಆದ್ದರಿಂದ ಮೃತ ಫಲಾನುಭವಿಗಳ ಕುರಿತು ಮಾಹಿತಿ ದೊರೆತಲ್ಲಿ, ಗ್ಯಾರಂಟಿ ಸಮಿತಿಯ ಸದಸ್ಯರುಗಳು ತಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಅಥವಾ ಶಿಶು ಅಭಿವೃದ್ಧಿ ಯೋಜನಾಽಕಾರಿಗಳಿಗೆ ಮಾಹಿತಿ ಒದಗಿಸುವ ಮೂಲಕ ಮೃತರ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುವುದನ್ನು ತಡೆಯಲು ಪ್ರಯತ್ನಿಸಬೇಕು ಎಂದರು.
ಹೆಸ್ಕಾಂ ನಿಂದ ಜಿಲ್ಲೆಯಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಗ್ಯಾರಂಟಿ ಸಮಿತಿಯ ಎಲ್ಲಾ ಸದಸ್ಯರು, ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲು ಅಗತ್ಯವಿರುವ ಕಾರ್ಯಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಸೂಚಿಸಿದರು. ವಿದ್ಯುತ್ ತಂತಿಗಳ ಮೇಲಿರುವ ಮರದ ಕೊಂಬೆಗಳು ಮತ್ತು ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ತಿಳಿಸಿದರು.
ಯುವನಿಽ ಯೋಜನೆಯ ಫಲಾನುಭವಿಗಳಿಗೆ ಸ್ವ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತಹ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಿ ಎಂದು ಕೌಶಲ್ಯಾಭಿವೃದ್ಧಿ ಅಽಕಾರಿಗಳಿಗೆ ಸೂಚಿಸಿದರು.
ಸಾರಿಗೆ ಸಂಸ್ಥೆಯಲ್ಲಿ ಹೊಸದಾಗಿ ನೇಮಕಗೊಂಡಿರುವ ಚಾಲಕರಿಗೆ ಸುರಕ್ಷಿತ ಚಾಲನೆ ಕುರಿತಂತೆ ಇನ್ನೂ ಹೆಚ್ಚಿನ ತರಬೇತಿಯನ್ನು ನೀಡುವಂತೆ ತಿಳಿಸಿದರು. ನಿಗದಿತ ನಿಲುಗಡೆ ಸ್ಥಳಗಳಲ್ಲಿ ಕಡ್ಡಾಯವಾಗಿ ಬಸ್ ನಿಲುಗಡೆ ಮಾಡುವ ಮೂಲಕ ಪ್ರಯಾಣಿಕರೊಂದಿಗೆ ಸೌಹಾರ್ದಯುತವಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ನಾಗರಾಜ ಮುರ್ಡೆಶ್ವರ, ಜನಾರ್ಧನ ಕುಪ್ಪ ದೇವಾಡಿಗ, ಪುರುಷೋತ್ತಮ ದೇವಪ್ಪ ನಾಯ್ಕ, ಕಾರವಾರ ತಾಲೂಕು ಅಧ್ಯಕ್ಷ ರಾಜೇಂದ್ರ ರಾಣೆ, ಜಿಪಂ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮ ನವರ್, ಪ್ರಾಧಿಕಾರದ ಸದಸ್ಯರಾದ ಪಾಂಡುರಂಗ ಕೆ ಗೌಡ, ರಿಯಾಜ್ ಅಹಮದ್ ಬಾಬುಸಾಬ್, ಸುಮಾ ರಾಜು ಉಗ್ರಾಣಕರ್, ರಾಜಶೇಖರ್ ರುದ್ರಗೌಡ ಹಿರೇಮಠ, ದೇವಿದಾಸ ನಾಗೇಶ ಶಾನುಭಾಗ, ಅಣ್ಣಪ್ಪ ಮಹಾಬಲೇಶ್ವರ ನಾಯ್ಕ, ರಾಜು ಮಂಜಪ್ಪ ನಾಯ್ಕ, ಅಶೋಕ ಕೃಷ್ಣಗೌಡ ಇದ್ದರು.

2585 ಕೋಟಿ ಬಿಡುಗಡೆ

ಗೃಹಜ್ಯೋತಿ ಯೋಜನೆಯಡಿ ಇದುವರೆಗೆ 582.92 ಕೋಟಿ ರೂ., ಗೃಹಲಕ್ಷಿ÷್ಮÃ ಯೋಜನೆಯಡಿ 1828.28 ಕೋಟಿ ರೂ., ಅನ್ನಭಾಗ್ಯ ಯೋಜನೆಯಡಿ 152.51 ಕೋಟಿ ರೂ., ಯುವನಽ ಯೋಜನೆಯಡಿ 22 ಕೋಟಿ ರೂ. ಮತ್ತು ಶಕ್ತಿ ಯೋಜನೆಯಡಿ 559.93 ಕೋಟಿ ರೂ. ಸೇರಿ ಒಟ್ಟು 2585 ಕೋಟಿ ರೂ. ಜಿಲ್ಲೆಯ ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಆಗಿದೆ ಎಂದು ಅಽಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net