

ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಸ್ವಾತಂತ್ರೃಹೋರಾಟಗಾರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಲು 2 ವರ್ಷಗಳ ಹಿಂದೆ ಅರಣ್ಯ ಇಲಾಖೆ ಮನವಿ ಸಲ್ಲಿಸಿದ್ದೇವೆ. ಈ ಸ್ಥಳದಲ್ಲೇ ವಿವಿಧ ಕಾರ್ಯಕ್ರಮ ನಡೆಸುತ್ತಾ ಬಂದಿದ್ದು, ಈ ಹಿನ್ನೆಲೆ ಈ ಸ್ಥಳದಲ್ಲಿಯೇ ಮೂರ್ತಿ ಪ್ರತಿಷ್ಠಾಪಿಸಲು ಮುಂದಾಗಿದ್ದು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಅವಕಾಶ ನೀಡಲ್ಲ. ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವಂತೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು.
ಮೂರ್ತಿ ಪ್ರತಿಷ್ಠಾಪನೆಗೆ ಕಾನೂನು ಪ್ರಕಾರ ಯಾವುದೇ ಅನುಮತಿ ಪಡೆಯದ ಕಾರಣ ಅವಕಾಶ ನೀಡಿಲ್ಲ.
ಅನುಮತಿ ಪಡೆಯದೆ ರಾತ್ರೋರಾತ್ರಿ ಸ್ವಾತಂತ್ರೃ ಹೋರಾಟಗಾರ ಸಂಗೊಳ್ಳಿ ಮೂರ್ತಿ ಪ್ರತಿಷ್ಠಾಪನೆಗೆ ಮುಂದಾಗಿದ್ದಕ್ಕೆ ತಡೆದಿದ್ದೇವೆ. ಕಾನೂನು ಪ್ರಕಾರ ಅನುಮತಿ ಪಡೆದುಕೊಂಡು ಮೂರ್ತಿ ಪ್ರತಿಷ್ಠಾಪನೆಗೆ ಮುಂದಾದರೆ ಅವಕಾಶ ನೀಡಲಾಗುವುದು.