ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆಗಳನ್ನು ಮಾಡಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿಯನ್ನು ಹೊಂದಿದ್ದು, ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ.ದಿಲೀಶ್ ಶಶಿ, ಎಸ್‌ಪಿ ದೀಪನ್ ಎಂ.ಎನ್. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು.