ಈಗಾಗಲೇ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಇದುವರೆಗೆ ಬೂತ್ ಮಟ್ಟದ 2,822 ಏಜೆಂಟರನ್ನು ನೇಮಕ ಮಾಡಿರುತ್ತಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 12,30,016 ಮತದಾರರಿದ್ದು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು , ಪೂರ್ವ ತಯಾರಿಗಾಗಿ ಮತದಾರರ ವಿವರಗಳನ್ನು ಹೋಲಿಸಿ ಶೇ.93.47% (ಮ್ಯಾಫಿಂಗ್ ಮಾಡಿದ್ದು) ಖಚಿತಪಡಿಸಿಕೊಳ್ಳಲಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕÀ್ಕರಣೆ ಆರಂಭವಾಗುವವರೆಗೆ ಮ್ಯಾಪಿಂಗ್ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.