ಶಿಸ್ತು, ಜವಾಬ್ದಾರಿ ಹೆಚ್ಚಿಸಲು ಕ್ರೀಡೆ ಸಹಕಾರಿ

ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿರಸಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ತಂಡ.
ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಶಿರಸಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ತಂಡ.
Published on
ಭಟ್ಕಳ: ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವ, ರಾಷ್ಟ್ರ ಪ್ರೇಮ ಮತ್ತು ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ರಮೇಶ ಕೆ. ಮೇಸ್ತ ಹೇಳಿದರು.
ತಾಲೂಕಿನ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು. ಜಡ ಜೀವನಶೈಲಿ ಹೆಚ್ಚು ಸಾಮಾನ್ಯವಾಗುತ್ತಿರುವ ಇಂದಿನ ಯುಗದಲ್ಲಿ, ಕ್ರೀಡೆಗಳಲ್ಲಿ ನಿಯಮಿತವಾಗಿ ಭಾಗವಹಿಸುವಿಕೆಯು ಬೊಜ್ಜು, ಹೃದ್ರೋಗ ಮತ್ತು ಮಧುಮೇಹದಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ. ಸುರೇಶ ವಿ ನಾಯಕ್ ಮಾತನಾಡಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀನಾಥ ಪೈ, ಉಪ ಪ್ರಾಂಶುಪಾಲ ಫಣಿಯಪ್ಪಯ್ಯ ಹೆಬ್ಬಾರ್ ಕಾರ್ಯಕ್ರಮ ನಿರ್ವಹಿಸಿದರು. ಪಂದ್ಯಾವಳಿಯಲ್ಲಿ ಶಿರಸಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ತಂಡ ಪ್ರಥಮ, ಸಿದ್ದಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ತಂಡ ದ್ವಿತೀಯ ಹಾಗೂ ಆತಿಥೇಯ ಶ್ರೀ ಗುರು ಸುಧೀಂದ್ರ ಮಹಾವಿದ್ಯಾಲಯದ ತಂಡ ತೃತೀಯ ಸ್ಥಾನ ಪಡೆದುಕೊಂಡವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net