ಸರ್ಕಾರಿ ಅಧಿಕಾರಿಗಳೇ ಮಾನವ ಹಕ್ಕುಗಳ ಸಂರಕ್ಞಕರು

ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್‌ ಸಭೆ ನಡೆಸಿದರು.
ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಟಿ.ಶ್ಯಾಮ ಭಟ್‌ ಸಭೆ ನಡೆಸಿದರು.
Published on
ಕಾರವಾರ: ಪ್ರತಿಯೊಬ್ಬ ವ್ಯಕ್ತಿಯೂ ಗೌರವ ಮತ್ತು ಸಂತೋಷದಿಂದ ಬದುಕಲು ಇರುವ ಹಕ್ಕುಗಳು ಮಾನವ ಹಕ್ಕುಗಳಾಗಿವೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಅವುಗಳ ಸಂರಕ್ಷಣಾಧಿಕಾರಿಯಾಗಿದ್ದಾನೆ. ಹಾಗಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ವಿಚಾರಣೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಬ್ಬಯ ಬುಧವಾರ ನಡೆಸಿ ಅವರು ಮಾತನಾಡಿದರು.
ಸರ್ಕಾರ ಜಾರಿಗೆ ತರುವ ಜನೋಪಯೋಗಿ ಯೋಜನೆಗಳು ಮತ್ತು ಸರ್ಕಾರಿ ಸೇವೆ ಸಂಬಂಧಿಸಿ ಅಧಿಕಾರಿಗಳು ಅನಗತ್ಯ ವಿಳಂಬಕ್ಕೆ ಆಸ್ಪದ ನೀಡದೇ ಸಾರ್ವಜನಿಕರಿಗೆ ಒದಗಿಸಬೇಕು. ಯಾವುದೇ ಒತ್ತಡದಲ್ಲಿದ್ದರೂ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ತಾಳ್ಮೆ ಮತ್ತು ಸೌಜನ್ಯದೊಂದಿಗೆ ವರ್ತಿಸಿ ಅವರ ಸಮಸ್ಯೆಗಳನ್ನು ಆಲಿಸಿ ಅಗತ್ಯ ನೆರವು ಒದಗಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿ ಸ್ಥಳಾವಕಾಶದ ಕೊರತೆಯಿದ್ದು, ಹೊಸದಾಗಿ ನಿರ್ಮಾಣವಾಗುತ್ತಿರುವ ಪಕ್ಕದ ಕಟ್ಟಡಕ್ಕೆ ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ಸೂಚಿಸಿದರು. ಕ್ರಿಮ್ಸ್ ಆಸ್ಪತ್ರೆಯಲ್ಲಿ ನಲ್ಲಿ ರೇಡಿಯಾಲಜಿಸ್ಟ್ ಹುದ್ದೆಯನ್ನು ಭರ್ತಿ ಮಾಡಬೇಕು. ಜಿಲ್ಲಾ ಕಾರಾಗೃಹವನ್ನು ಶೀಘ್ರ ನವೀಕರಣಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಿದರು.
ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ಆಯೋಗದಲ್ಲಿ ಸಲ್ಲಿಕೆಯಾಗುವ ದೂರುಗಳಲ್ಲಿ ಪೊಲೀಸ್ ಇಲಾಖೆಗೆ ಸಂಬಂಸಿದ ದೂರುಗಳು ಅಽಕವಾಗಿದ್ದು, ನಂತರದಲ್ಲಿ ಕಾರಾಗೃಹ, ಕಂದಾಯ, ಅರಣ್ಯ, ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಸಿದ ದೂರುಗಳು ಇವೆ ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ.ದಿಲೀಷ್ ಶಶಿ, ಎಸ್‌ಪಿ ದೀಪನ್ ಎಂ.ಎನ್. ಹಾಗೂ ಇತರ ಇಲಾಖೆ ಅಽಕಾರಿಗಳಿದ್ದರು.

ಸಂಸ್ಥೆಗಳ ವಿರುದ್ಧ ಕ್ರಮ

ಮಾನವ ಹಕ್ಕುಗಳ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲ ಸಂಘ, ಸಂಸ್ಥೆಗಳು ಅಽಕಾರಿಗಳಿಂದ ಹಣ ವಸೂಲಿ ಮಾಡುತ್ತಿರುವ ವಿಚಾರ ಗಮನಕ್ಕಿದೆ. ದೂರು ನೀಡಿದಲ್ಲಿ ಕ್ರಮ ವಹಿಸಲಾಗುವುದು ಎಂದು ಟಿ.ಶ್ಯಾಮ ಭಟ್ ತಿಳಿಸಿದ್ದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದ 29 ಜಿಲ್ಲೆಗಳಲ್ಲಿ ಭೇಟಿ ನೀಡಿದ್ದೇವೆ. ಆಗ 8 ಸಾವಿರ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದವು. ಈಗ 3 ಸಾವಿರ ಪ್ರಕರಣಗಳು ಬಾಕಿ ಇವೆ. ಪ್ರತಿ ತಿಂಗಳು 500 ಪ್ರಕರಣಗಳು ಆಯೋಗದಲ್ಲಿ ದಾಖಲಾಗುತ್ತವೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಪತ್ರಿಕೆಗಳನ್ನು ನೋಡಿ ಶೇ.60 ರಷ್ಟು ಪ್ರಕರಣಗಳನ್ನು ಸ್ವಯಂ ಪ್ರೇರಿತವಾಗಿ ನಾವು ದಾಖಲಿಸಿಕೊಳ್ಳುತ್ತೇವೆ ಎಂದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟು 30 ಪ್ರಕರಣ ವಿಚಾರಣೆಗೆ ಬಾಕಿ ಇದ್ದು, 27 ಕ್ಕೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಮೂರು ಪ್ರಕರಣಗಳಿಗೆ ದೂರುದಾರರಿಗೆ ಮಾಹಿತಿ ನೀಡಲಾಗಿದೆ.ಹೊಸದಾಗಿ ಐದು ಪ್ರಕರಣಗಳು ದಾಖಲಾಗಿವೆ ಎಂದರು.

ನೇರವಾಗಿ ದೂರು ಸಲ್ಲಿಸಿ

ಆಯೋಗ ಬೆಂಗಳೂರಿನಲ್ಲಿ ಮಾತ್ರ ಕಚೇರಿ ಹೊಂದಿದೆ. ಮಾನವ ಹಕ್ಕು ಉಲ್ಲಂಘನೆ ಸಂಬಂಧ ರಿಜಿಸ್ಟರ್ ಅಂಚೆ ಮೂಲಕ ಆನ್‌ಲೈನ್ ಮೂಲಕವೂ ದೂರು ಸಲ್ಲಿಸಿದರೂ ನಾವು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತೇವೆ. ದೂರುದಾರನನ್ನು ವಿಚಾರಣೆಗೆ ಕರೆಯುವುದಿಲ್ಲ. ಅಧಿಕಾರಿಗಳಿಗೆ ನೋಟಿಸ್ ನೀಡಿ ಹೇಳಿಕೆ ಪಡೆಯುತ್ತೇವೆ. ಇದುವರೆಗೆ 19 ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಅದು ಜಾರಿಯಾಗಿದೆ. ಅಽಕಾರಿಗಳಿಗೆ ದಂಡ ವಿಧಿಸುವಂತೆಯೂ ಹಲವು ಪ್ರಕರಣಗಳಲ್ಲಿ ಶಿಫಾರಸು ಮಾಡಿದ್ದೇವೆ ಎಂದು ಟಿ.ಶ್ಯಾಮ ಭಟ್ ತಿಳಿಸಿದರು.
.............
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net