ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೀಶೆಲ್ ಡಿಸೋಜಾಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಕಾರಣನಾಗಿದ್ದಾನೆ ಎಂದು ಮೃತಳ ತಂದೆ ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಆರೋಪಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ಹುಟುಕಾಟಕ್ಕಾಗಿ ಮೂವರು ಇನ್ಸ್ಪೆಕ್ಟರ್‌ಗಳು, 6 ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ನಿಯೋಜಿಸಲಾಗಿತ್ತು. ಆತನನ್ನು ಚೆನ್ನೈನಲ್ಲಿ ಬಂಧಿಸಿ ಕರೆತಂದು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದರು.