ಮಂಗಳೂರಿನ ಮಹಮ್ಮದ್ ರಫೀಕ್ ಇಸ್ಮಾಯಿಲ್ ಎಂಬಾತನನ್ನು ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಲು ಯಲ್ಲಾಪುರ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ಬೆಳಗಾವಿಗೆ ತೆರಳಿದ್ದರು. ಬೆಳಗಾವಿಯ ಖಾಸಭಾಗ ವಾಲಿ ಚೌಕದ ಬಳಿ ಇರುವ ವೊಡ್ಕಾ ಬಾರ್ ಬಳಿ ಈತನನ್ನು ಬಂಧಿಸಲು ಯತ್ನಿಸಿದಾಗ ಪಿಎಸ್ಐಗಳಾದ ರಾಜಶೇಖರ ಚೆನ್ನಪ್ಪ ವಂದಲಿ ಹಾಗೂ ಸಿದ್ದಪ್ಪ ಗುಡಿ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಅವರನ್ನು ತಪ್ಪಿಸಿ ಆರೋಪಿಯನ್ನು ಹಿಡಿಯಲು ಹೋದ ಸಿಬ್ಬಂದಿ ಮಹಮ್ಮದ್ ಶಫಿ ಅವರ ಮೇಲೂ ಹಲ್ಲೆ ಮಾಡಿದ್ದಾನೆ.