ಸುಬ್ರಹ್ಮಣ್ಯ ದೇವರ ರಥೋತ್ಸವ ಸಂಪನ್ನ

ಶಿರಸಿಯ ನೀಲೇಕಣಿ ಸುಬ್ರಹ್ಮಣ್ಯ ದೇವರ ರಥೋತ್ಸವ ನಡೆಯಿತು. ಸಹಸ್ರಾರು ಭಕ್ತರು ದೇವರ ದರ್ಶನ ಪಡೆದುಕೊಂಡರು.
ಶಿರಸಿಯ ನೀಲೇಕಣಿ ಸುಬ್ರಹ್ಮಣ್ಯ ದೇವರ ರಥೋತ್ಸವ ನಡೆಯಿತು. ಸಹಸ್ರಾರು ಭಕ್ತರು ದೇವರ ದರ್ಶನ ಪಡೆದುಕೊಂಡರು.
Published on
ಶಿರಸಿ: ನಗರದ ನಿಲೇಕಣಿಯ ಸುಬ್ರಹ್ಮಣ್ಯ ದೇವರ ರಥೋತ್ಸವವು ಬುಧವಾರ ಸಡಗರ ಸಂಭ್ರಮದಿಂದ ಜರುಗಿತು.
ಚಂಪಾ ಷಷ್ಠಿ ಪ್ರಯುಕ್ತ ಸುಬ್ರಹ್ಮಣ್ಯ ದೇವರ ರಥೋತ್ಸವ ಏರ್ಪಡಿಸಲಾಗಿದ್ದು, ಬುಧವಾರ ಬೆಳಗ್ಗೆ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಅಭಿಷೇಕ, ಅಲಂಕಾರ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
ಮಧ್ಯಾಹ್ನ ಪಲ್ಲಕ್ಕಿ ಮೂಲಕ ದೇವರ ಉತ್ಸವ ಮೂರ್ತಿಯನ್ನು ದೇವಸ್ಥಾನದಿಂದ ತಂದು ಸಿಂಗಾರಗೊಂಡ ನಿಂತಿದ್ದ ಮಹಾರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಪಲ್ಲಕ್ಕಿಯಲ್ಲಿ ದೇವರ ಉತ್ಸವ ಮೂರ್ತಿ ಬರುತ್ತಿದ್ದಂತೆ ನೆರೆದಿದ್ದ ಭಕ್ತರು ಹರ್ಷೋದ್ಗಾರ ಮಾಡಿದರು. ಜಿಲ್ಲೆಯ ವಿವಿಧೆಡೆಯಿಂದ ಬಂದ ಭಕ್ತರು ರಥದಲ್ಲಿ ವಿರಾಜಮಾನವಾಗಿ ಕುಳಿತ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಹಲವು ಭಕ್ತರು ತಾವು ಬೆಳೆದ ಅಡಿಕೆ, ಭತ್ತದ ತೆನೆ, ತೆಂಗಿನಕಾಯಿ ಸೇರಿ ವಿವಿಧ ಬೆಳೆಗಳನ್ನು ರಥಕ್ಕೆ ಕಟ್ಟುವ ಮೂಲಕ ದೇವರಿಗೆ ಸಮರ್ಪಿಸಿದರು. ಪ್ರತಿ ವರ್ಷ ನಿಲೇಕಣಿ ರಥೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಅದರಂತೆ ಈ ವರ್ಷವೂ ಸಹ ಸುಬ್ರಹ್ಮಣ್ಯ ದೇವರನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡುತ್ತಿದ್ದಂತೆ ಭಕ್ತ ಸಮೂಹವೇ ಹರಿದು ಬಂದಿದೆ. ನಿಲೇಕಣಿ ಸುಬ್ರಹ್ಮಣ್ಯ ದೇವಸ್ಥಾನದಿಂದ ಅಗಸೇಬಾಗಿಲುವರೆಗೂ ಅಂಗಡಿ ಮುಂಗಟ್ಟುಗಳು ಕಂಡುಬಂದವು. ಮುಖ್ಯ ರಸ್ತೆಯಲ್ಲಿಯೇ ರಥೋತ್ಸವ ನಡೆಯುವ ಕಾರಣದಿಂದ ಅಲ್ಪ ಮಟ್ಟಿಗೆ ಸಂಚಾರ ದಟ್ಟಣೆ ಉಂಟಾಯಿತು. ಮಹಾರಥದಲ್ಲಿ ವಿರಾಜಮಾನವಾಗಿ ಕುಳಿತ ಸುಬ್ರಹ್ಮಣ್ಯ ದೇವರ ದರ್ಶನವನ್ನು ಸಾವಿರಾರು ಭಕ್ತರು ಪಡೆದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net