ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು.
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕಾರು.
Published on
ದಾಂಡೇಲಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿ, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಜೊಯಿಡಾ- ದಾಂಡೇಲಿ ರಸ್ತೆಯ ಪಣಸೋಲಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಜೊಯಿಡಾ ಮತ್ತು ದಾಂಡೇಲಿಗೆ ಪ್ರವಾಸಕ್ಕೆಂದು ಕೋಲಾರದಿಂದ ಬಂದಿದ್ದ ನಾಲ್ವರಿದ್ದ ಕಾರು ಜೊಯಿಡಾ ಕಡೆಯಿಂದ ದಾಂಡೇಲಿಗೆ ಬರುತ್ತಿರುವಾಗ ಚಾಲಕನ ನಿಯಂತ್ರಣ ತಪ್ಪಿ ಪಣಸೋಲಿ ಕ್ರಾಸ್ ಬಳಿ ಮರಕ್ಕೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ. ಗಾಯಗೊಂಡವರನ್ನು ತಕ್ಷಣವೇ ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಗಂಭೀರ ಗಾಯಗೊಂಡಿದ್ದ ವಿಷ್ಣುವರ್ಧನ ಕೃಷ್ಣಪ್ಪ ರೆಡ್ಡಿ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಂದೀಪ್ ರೆಡ್ಡಿ ಮತ್ತು ಶ್ರೀಧರ್ ರೆಡ್ಡಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net