ಖರ್ವಾ ಗ್ರಾಪಂನಲ್ಲಿ 35 ವರ್ಷಗಳಿಂದ ವಾಟರ್‌ಮನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಗುರುವಾರ ಮಧ್ಯಾಹ್ನದಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಇವರ ಪತ್ತೆಗಾಗಿ ಕುಟುಂಬಸ್ಥರು ಹಾಗೂ ಸ್ಥಳೀಯರು ತೀವ್ರ ಹುಡುಕಾಟ ನಡೆಸಿದ್ದರು ಪತ್ತೆಯಾಗಿರಲಿಲ್ಲ. ಗುರುವಾರ ಕುಟುಂಬಸ್ಥರು ಗೋಪಾಲ ನಾಪತ್ತೆಯಾದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಸಂಜೆ ನದಿಯ ದಡದ ಸಮೀಪ ಶವ ಪತ್ತೆಯಾಗಿದೆ. ಈ ಕುರಿತು ಹೊನ್ನಾವರ ಠಾಣೆಯಲ್ಲಿ ದೂರು ದಾಖಲಾಗಿದೆ. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.