ರಕ್ಷಣೆಗೆ ಮುಂದಾದವರ ಮೇಲೆ ಪ್ರಕರಣ ಏಕೆ? Communal

ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Communal)ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Communal)ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಪ್ರಶ್ನೆ
  • ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಅನ್ಯ ಕೋಮಿನ ಯುವಕ
  • ದೂರು- ಪ್ರತಿದೂರು
ಭಟ್ಕಳ: ಅನ್ಯ ಕೋಮಿನ ಯುವಕನೊಬ್ಬ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ (Communal) ತಡೆದು ಪೊಲೀಸರಿಗೆ ಒಪ್ಪಿಸಿದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.
ಯುವಕ ಯುವತಿಯನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಬುಧವಾರ ರಾತ್ರಿ ಪ್ರತಿಭಟನೆ ನಡೆಸಿದರು.
ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಮಾತನಾಡಿ, ತಪ್ಪು ಮಾಡಿದ ಆರೋಪಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಬದಲು ಯುವತಿಯ ರಕ್ಷಣೆಗೆ ಮುಂದಾದ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದು ಖಂಡನೀಯ.
ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಸ್ಥಳೀಯರಿಗೆ ಅನುಮಾನ ಮೂಡಿದ್ದು, ಕಾರ್ಯಕರ್ತರು ತಡೆದು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಪಡೆದಿದ್ದರೂ, ಆರೋಪಿಯ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಲು ಮುಂದಾಗಲಿಲ್ಲವೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೂರು- ಪ್ರತಿದೂರು

ಪರಿಚಯದ ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ಕೆಲವರು ವಾಹನವನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕಾರಗದ್ದೆ 2ನೇ ಕ್ರಾಸ್ ನಿವಾಸಿ ಶಾಹೀದ್ ಖಾನ್ ಅವರು ಕುಮಾರ ನಾಯ್ಕ, ಶ್ರೀಕಾಂತ ನಾಯ್ಕ ಹಾಗೂ ಇನ್ನಿಬ್ಬರು ಅಪರಿಚಿತರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಇನ್ನು ಮಾರುಕೇರಿ ನಿವಾಸಿ 21 ವರ್ಷದ ಯುವತಿ ಶಾಹೀದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಾತನಾಡಬೇಕಿದೆ ಎಂದು ಕರೆಸಿ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಮಾರುಕೇರಿ ಕಡೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ ಎಂದು ದೂರು ದಾಖಲಿಸಿದ್ದಾರೆ.

ದೂರು ಹಿಂಪಡೆಯಲು ಆಗ್ರಹ

ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು.
ಕೂಡಲೆ ಪ್ರಕರಣ ಹಿಂಪಡೆಯದಿದ್ದರೆ ಭಟ್ಕಳ ಚಲೋ ಹಾಗೂ ಭಟ್ಕಳ ಬಂದ್‌ಗೆ ಕರೆ ನೀಡಲಾಗುವುದು ಎಂದು ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಘೋಷಿಸಿದರು.
ಮಾಜಿ ಸಚಿವ ಶಿವಾನಂದ ನಾಯ್ಕ, ಈಶ್ವರ ಎನ್. ನಾಯ್ಕ, ಸುಬ್ರಾಯ ದೇವಾಡಿಗ, ಕೃಷ್ಣ ನಾಯ್ಕ, ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಜಯಂತ ನಾಯ್ಕ, ರಾಮಕೃಷ್ಣ ನಾಯ್ಕ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ ಹನುಮಾನನಗರ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಶಾಹೀದ್ ಖಾನ್ ಬಂಧನ

ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಶಾಹೀದ್ ಖಾನ್‌ನನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
ಜಿಲ್ಲಾ ಹೆಚ್ಚುವರಿ ಎಸ್‌ಪಿ ಕೃಷ್ಣಮೂರ್ತಿ, ಅವರು ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು. ಒಂದೇ ಘಟನೆಯ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ದೂರುಗಳು ದಾಖಲಾಗಿರುವ ಕಾರಣ ಭಟ್ಕಳ ಗ್ರಾಮೀಣ ಪೊಲೀಸರು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ನೈಜ ವಾಸ್ತವಾಂಶ ಹೊರಬರಲಿದೆ ಎಂದು ಡಿವೈಎಸ್ಪಿ ಗಿರೀಶ್ ಪತ್ರಿಕೆಗೆ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net