ಜಾತ್ರೆ ಯಶಸ್ಸಿಗೆ ಸಮನ್ವಯದಿಂದ ಕೆಲಸಮಾಡಿ

MLA Bhimanna Nayak spoke at the pre-meeting for the Kondli Marikamba Devi fair at the Papam Hall in Siddapur.
MLA Bhimanna Nayak spoke at the pre-meeting for the Kondli Marikamba Devi fair at the Papam Hall in Siddapur.
Published on
ಸಿದ್ದಾಪುರ: ಪಟ್ಟಣದ ಕೊಂಡ್ಲಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.
ಸ್ಥಳೀಯ ಪಪಂ ಸಭಾಭವನದಲ್ಲಿ ಜಾತ್ರಾ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು. ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಕುಡಿಯುವ ನೀರು, ಶೌಚಾಲಯ ಮತ್ತು ಬೀದಿ ದೀಪಗಳ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಪಪಂ ಅಧಿಕಾರಿಗಳು ಗಮನಹರಿಸಬೇಕು.
ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಪೂರ್ಣಗೊಳಿಸಬೇಕು. ವಾಹನ ದಟ್ಟಣೆ ನಿಯಂತ್ರಿಸಲು ಮತ್ತು ಭಕ್ತರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಪೊಲೀಸ್ ಇಲಾಖೆ ಸೂಕ್ತ ಪಾಕಿರ್ಂಗ್ ವ್ಯವಸ್ಥೆ ಮಾಡಬೇಕು.
ಜಾತ್ರೆಯ ಸಮಯದಲ್ಲಿ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಜನದಟ್ಟಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಿಸಿ ಕ್ಯಾಮರಾಗಳ ಅಳವಡಿಕೆ ಹಾಗೂ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಬೇಕು.
ಮಾರಿಕಾಂಬಾ ದೇವಾಲಯದ ಅಧ್ಯಕ್ಷ ಕೆ.ಜಿ. ನಾಯ್ಕ ಹಣಜಿಬೈಲ್, ಪಪಂ ಆಡಳಿತಾಧಿಕಾರಿ ಎಂ.ಆರ್. ಕುಲಕರ್ಣಿ, ಪಪಂ ಮುಖ್ಯಾಧಿಕಾರಿ ಮಹಮ್ಮದ್ ಯಾಕೂಬ್, ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು, ಜಾತ್ರಾ ಕಮಿಟಿಯ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net