ಅಂಬೇಡ್ಕರ್ ಕಾಲನಿಯ ನಿವಾಸಿ ರೋಶನ್ ಪ್ರದೀಪ ಹುಲಸ್ವಾರ(21) ಮೃತರು. ಜೂನ್ 7 ರಂದು ನಂದನಗದ್ದಾ ಸಂತೋಷಿಮಾತಾ ದೇವಸ್ಥಾನದ ಸಮೀಪದ ಮೈದಾನದಲ್ಲಿ ಗಲಾಟೆ ನಡೆದಿತ್ತು. ಆಗ ಅಂಬೇಡ್ಕರ್ ಕಾಲನಿಯ ಸಂಜಯ ಸತೀಶ ಮಾಂಗ್ರೆಕರ್ ರೋಶನ್ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದ. ತೀವ್ರವಾಗಿ ಗಾಯಗೊಂಡಿದ್ದ ರೋಶನ್‌ನನ್ನು ಕ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅಲ್ಲಿಂದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಶನ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಈ ಸಂಬಂಧ ಸಂಜಯ್ ಸತೀಶ ಮಾಂಗ್ರೆಕರ್ ಎಂಬಾತನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.ರೋಶನ್ ವೆಲ್ಡರ್ ಕೆಲಸ ಮಾಡುತ್ತಿದ್ದ. ಸಂಜಯ್ ಇಲೆಕ್ಟ್ರೀಶಿಯನ್ ಆಗಿದ್ದ, ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು.