ಜೆಜೆಎಂ ಕಾಮಗಾರಿಗಳಿಗೆ ಶೀಘ್ರ ವಿದ್ಯುತ್‌ ಸಂಪರ್ಕ ನೀಡಿ : ಜಿಪಂ ಸಿಇಒ ಸೂಚನೆ

ಜಿಪಂ ಸಿಇಒ ಡಾ.ದಿಲೀಶ್‌ ಶಶಿ ಅವರು ಸಭೆ ನಡೆಸಿದರು.
ಜಿಪಂ ಸಿಇಒ ಡಾ.ದಿಲೀಶ್‌ ಶಶಿ ಅವರು ಸಭೆ ನಡೆಸಿದರು.
Published on
ಕಾರವಾರ: ಜೆಜೆಎಂ ಕಾಮಗಾರಿಗಳು ಪೂರ್ಣಗೊಂಡಿರುವ ಕಡೆ ಹೆಸ್ಕಾಂ ವತಿಯಿಂದ ಶೀಘ್ರವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಶ್ ಶಶಿ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜನೆಯಾಗಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಲಾಖೆಗಳ ನಡುವೆ ಸಮನ್ವಯದ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹಾಗೂ ಪ್ರಗತಿಯಲ್ಲಿ ಕುಂಠಿತವಾಗುತ್ತಿದೆ. ಸಂಬAಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಲ ಪ್ರಾರಂಭವಾಗುವ ಮುನ್ನ ಕುಡಿಯುವ ನೀರಿನ ಮೂಲಗಳು ಮತ್ತು ನೀರಿನ ಮಾದರಿಗಳನ್ನು ಪರೀಕ್ಷಿಸಿ, ನೀರು ಕಲುಷಿತಗೊಳ್ಳದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ. ಶೀಘ್ರದಲ್ಲಿ ಶಾಲೆ, ಕಾಲೇಜ್‌ಗಳು ಪ್ರಾರಂಭವಾಗುತ್ತಿದ್ದು, ಇಲ್ಲಿರುವ ಕುಡಿಯುವ ನೀರಿನ ಮೂಲಗಳನ್ನು ಪರೀಕ್ಷಿಸಿ, ಕುಡಿಯಲು ನೀರು ಯೋಗ್ಯವಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಿ. ಜಿಲ್ಲೆಯ ಎಲ್ಲ ಶಾಲೆ, ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಕುಡಿಯುವ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಟಾಸ್ಕ್ ಪೊರ್ಸ್ ಸಮಿತಿಗೆ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಸರಿಯಾದ ಮಾಹಿತಿ ಒಳಗೊಂಡ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಲ್ಲಾಭಕ್ಷ್, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜನೀಯರ್ ಎಚ್. ಸತ್ಯಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net