

ಚಾಮರಾಜನಗರ: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಆ.2 ಮತ್ತು 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
2ರಂದು ಬೆಳಗ್ಗೆ 11.30 ಗಂಟೆಗೆ ಹನೂರು ತಾಲೂಕಿನ ಪೊನ್ನಾಚಿಗೆ ಆಗಮಿಸಿ ಅಲ್ಲಿನ ಶ್ರೀ ಸಾಲೂರು ಸ್ವಾಮಿ ಕೃಪಾ ಪ್ರೌಢಶಾಲಾ ಆವರಣದಲ್ಲಿ ಆಲಂಬಾಡಿ ಮಠದ ಕಟ್ಟಡದ ಭೂಮಿ ಪೂಜೆ, ಬಾಲಕರ ವಸತಿ ನಿಲಯದ ಉದ್ಘಾಟನೆ ಹಾಗೂ ಶ್ರೀಸಾಲೂರು ಮಠದ ಹಿರಿಯ ಶ್ರೀ ಪಟ್ಟದ ಗುರುಸ್ವಾಮಿಗಳ ಗುರುವಂದನಾ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 1.30 ಗಂಟೆಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವರು. ಮಧ್ಯಾಹ್ನ 3 ಗಂಟೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಮಲೆ ಮಹದೇಶ್ವರಸ್ವಾಮಿಗೆ ಪೂಜೆ ಸಲ್ಲಿಸುವರು. ಬಳಿಕ ಮಲೆಮಹದೇಶ್ವರ ಬೆಟ್ಟದಲ್ಲಿಯೇ ವಾಸ್ತವ್ಯ ಹೂಡುವರು. ಆ.3ರಂದು ಬೆಳಗ್ಗೆ ಮಲೆಮಹದೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ 8.30 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.