

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಂದಿನ 2 ತಿಂಗಳೊಳಗೆ ನೀಲನಕಾಶೆ ತಯಾರಿಸಿ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಬುಧವಾರ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು ‘
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ಆಧುನೀಕರಣ ಮಾಡುವ ಯೋಜನೆ ಒಂದು ಹಂತಕ್ಕೆ ಬಂದಿದ್ದು ಹಣ ಮೀಸಲಿರಿಸಲಾಗಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದರು.
ಮಂಗಳೂರು ಭಾಗದಲ್ಲಿ ಪಾಲ್ಘಾಟ್, ಕೊಂಕಣ ಹಾಗೂ ಮೈಸೂರು ರೈಲು ವಿಭಾಗವಿದ್ದು, ಈ ಮೂರರ ಮಧ್ಯೆ ಕೆಲವು ಕೆಲಸಗಳಿಗೆ
ಅಡ್ಡಿಯಾಗಿದೆ. ನಡೆದಿಲ್ಲ. ಅದಕ್ಕಾಗಿ ಮೂರೂ ವಿಭಾಗದ ಪ್ರಮುಖ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸಾವಿರಾರು ಕಿ.ಮೀ. ಹಳಿಗಳು ದ್ವಿಗುಣಗೊಂಡಿದೆ. ಹೊಸ ಲೈನ್, ಮೇಲ್ಸೆತುವೆ, ಕೆಳ ಸೇತುವೆ , ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆದಿದೆ. ಅಮೃತ್ ಭಾರತ್, ಗತಿಶಕ್ತಿ ಯೋಜನೆಯಲ್ಲಿ ವಿವಿಧ ರೈಲು ನಿಲ್ದಾಣಗಳು ಅಭಿವೃದ್ದಿ ಆಗಿದೆ. ಆದರೆ ಮಂಗಳೂರು ಭಾದಲ್ಲಿ ಹಲವು ಗೊಂದಲಗಳಿಂದ ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ಇದನ್ನು ಸರಿ ಪಡಿಸಲಾಗುವುದು. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಜತೆ ಮಾತುಕತೆ ನಡೆಸಲಾಗುವುದು ಎಂದು ಸಚಿವ ಸೋಮಣ್ಣ ತಿಳಿಸಿದರು.
ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮುಖ್ಯಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.