ತುಮಕೂರು ವಿವಿ ಅಭಿವೃದ್ಧಿಗೆ ಕೇಂದ್ರ ನೆರವಿಗೆ ಮೊರೆ

Minister_VV
Published on

ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಅನುದಾನವನ್ನು ಕೋರಿ ಕೇಂದ್ರ ಶಿಕ್ಷಣ ಸಚಿವ ಧಮೇರ್ಂದ್ರ ಪ್ರಧಾನ್​ರನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರ ನೇತೃತ್ವದಲ್ಲಿ ವಿವಿ ನಿಯೋಗವು ಭೇಟಿ ಮಾಡಿ ಮನವಿ ಮಾಡಿದೆ.

ನವದೆಹಲಿಯಲ್ಲಿ ಗುರುವಾರ ಧಮೇರ್ಂದ್ರ ಪ್ರಧಾನ್​ರನ್ನು ಸೋಮಣ್ಣರೊಂದಿಗೆ ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿವಿ ಕುಲಸಚಿವೆ ನಾಹಿದಾ ಜಮ್​ ಜಮ್​ ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿವಿ ಹೊಸ ಕ್ಯಾಂಪಸ್​ನಲ್ಲಿ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಅನುದಾನವನ್ನು ಮಂಜೂರು ಮಾಡುವುದರ ಜತೆಗೆ ಜಿಲ್ಲೆಯ ಇತರ ಭಾಗದಲ್ಲಿ ಶಿಕ್ಷಣಕ್ಷೇತ್ರದಲ್ಲಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯಿಂದು ವಿಶೇಷ ಅನುದಾನ ನೀಡುವಂತೆ ಕೋರಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net