

ಕಾರವಾರ VA Strike: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ಎಲ್ಲ ತಹಸೀಲ್ದಾರ್ 2 ನೇ ಹಂತದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಕರ್ತವ್ಯ ಬಹಿಷ್ಕರಿಸಿ ಜಿಲ್ಲೆಯ ಎಲ್ಲ ತಹಸೀಲ್ದಾರ್ ಕಚೇರಿಗಳಲ್ಲಿ ಧರಣಿ ಕುಳಿತಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಧರಣಿ ನಡೆಸಿದ್ದರು. ಆದರೆ, ಆಗ ನೀಡಿದ್ದ ಭರವಸೆಗಳು ಈಡೇರದ ಕಾರಣ ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಉತ್ತಮ ಕಚೇರಿ, ಪೀಠೋಪಕರಣಗಳು, ಕಾರ್ಯನಿರ್ವಹಿಸಲು ಲ್ಯಾಪ್‌ಟಾಪ್, ಮೊಬೈಲ್ ಮುಂತಾದ ಉಪಕರಣಗಳನ್ನು ನೀಡಬೇಕು. ಕಂದಾಯ ಇಲಾಖೆಗಳ ಹಾಗೂ ಇತರ ಇಲಾಖೆಗಳಿಗೆ ಸೇರಿದ 21 ತಂತ್ರಾಂಶಗಳನ್ನು ನಿರ್ವಇಸುವ ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನೀಡಬೇಕು.
ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಬೇಕು. ಇತರೆ ಇಲಾಖೆಗಳಲ್ಲಿ ಇರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗೆ ಮಾರ್ಗಸೂಚಿಗಳನ್ನು ರೂಪಿಸಬೇಕು. ಪೌತಿ ಖಾತೆ ಆಂದೋಲನ ಕೈಬಿಡಬೇಕು ಎಂಬುದು ಸೇರಿ 23 ಬೇಡಿಕೆಗಳ ಪಟ್ಟಿಯನ್ನು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಽಕಾರಿಗಳ ಕೇಂದ್ರ ಸಂಘವು ನೀಡಿದೆ.