ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗಲಿ

11LNG02
Published on

ಲಿಂಗಸುಗೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ನೇಮಕ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ತಡೆಯಬೇಕೆಂದು ಒತ್ತಾಯಿಸಿ ಎಐಡಿವೈಒ ಪ್ರತಿಭಟನೆ ನಡೆಸಿ ಎಸಿ ಕಚೇರಿ ಎಫ್‌ಡಿಸಿ ಆದಪ್ಪಗೆ ಗುರುವಾರ ಮನವಿ ಸಲ್ಲಿಸಿತು.

ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಚಿತ್ರಕಲೆ, ದೈಹಿಕ ಶಿಕ್ಷಣ, ಸಂಗೀತ, ರಂಗ ಕಲಾ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಬರಗಾಲ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಕನಿಷ್ಠ 200 ದಿನ ಕೆಲಸ ನೀಡಿ, ಕೂಲಿ ಮೊತ್ತವನ್ನು 600 ರೂ.ಗೆ ಹೆಚ್ಚಿಸಬೇಕು ಎಂದು ಆಗ್ರಹಿಸಲಾಯಿತು.

ಸಾರಿಗೆ ಮತ್ತು ಸಾರ್ವಜನಿಕ ಉದ್ದಿಮೆಗಳಲ್ಲಿ ಐಟಿಐ ಮತ್ತು ಡಿಪ್ಲೊಮಾ ಉತ್ತೀರ್ಣರಾದವರಿಗೆ ಅಪ್ರೆಂಟಿಸ್ ಸೌಲಭ್ಯ ಕಲ್ಪಿಸಿ ಉದ್ಯೋಗ ನೀಡಬೇಕು. ಐಟಿಐ ವಿದ್ಯಾರ್ಥಿಗಳಿಗೆ ತರಬೇತಿ ಹಂತದಲ್ಲಿ ಶಿಷ್ಯವೇತನ ನೀಡಬೇಕು. ಎಲ್ಲ ಇಲಾಖೆಗಳಲ್ಲಿನ ಗುತ್ತಿಗೆ ಪದ್ಧತಿ ರದ್ದುಗೊಳಿಸುವುದರೊಂದಿಗೆ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕೆಂದು ಒತ್ತಾಯಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net