ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಲಿ: ಗೌರವಧನದ ಆಧಾರದ ಮೇಲೆ ನೇಮಕಾತಿ

job new
Published on

ಮದ್ದೂರು: ತಾಲೂಕಿನ ವಳಗೆರೆಹಳ್ಳಿ, ಕೆಸ್ತೂರು, ಹೂತಗೆರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಮಾಸಿಕ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಂಗವಿಕಲರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಎಸ್‌ಎಸ್‌ಎಲ್ಸಿಯಲ್ಲಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರಬೇಕು. ಅರ್ಹರು ಅರ್ಜಿಯನ್ನು ಮದ್ದೂರು ತಾಲೂಕು ಪಂಚಾಯಿತಿಯಿಂದ ಪಡೆದು ಆ.31ರೊಳಗೆ ಸಲ್ಲಿಸಬಹುದು. ಮಾಹಿತಿಗೆ ದೂ.ಸಂ 08232-231090, ಮೊ.ಸಂ 9980053238 ಅಥವಾ 7483452096 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net