

ಮಂಗಳೂರು : ಜಾನುವಾರುಗಳಿಗೆ ವೈರಸ್‌ನಿಂದ ಬರುವ ಚರ್ಮಗಂಟು ರೋಗದ ಮುನ್ನೆಚ್ಛರಿಕಾ ಕ್ರಮವಾಗಿ ಪಶುಪಾಲನಾ
ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಪ್ರತೀ ಜಾನುವಾರುಗಳಿಗೆ ದ.ಕ.ಜಿಲ್ಲೆಯಾದ್ಯಂತ ಜೂ. 20 ರಿಂದ ಜು.20ರವರೆಗೆ ಚರ್ಮ ಗಂಟು ವಿರುದ್ಧ ಉಚಿತ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ.
4 ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಈ ಹಿಂದೆ ಲಸಿಕೆ ಹಾಕಿಸಿದ್ದರೂ ಈ ಬಾರಿಯೂ ಹೈನುಗಾರರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಚರ್ಮಗಂಟು ರೋಗದಿಂದ ರಕ್ಷಿಸಬೇಕು. ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘದ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
..........................