12-14 ವರ್ಷದೊಳಗಿನ ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ

IMG-20220316-WA0006
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್‌ ನಿರೋಧಕ ಕೋರ್ಬೆವ್ಯಾಕ್ಸ್‌ ಲಸಿಕೆ ನೀಡುವ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಲಾಯಿತು. ನಗರದ ವೆನ್ಲಾಕ್‌ ಆಸ್ಪತ್ರೆಯ ಆಯುಷ್‌ ಬ್ಲಾಕ್‌ನಲ್ಲಿ ಮೊದಲ ಹಂತದಲ್ಲಿ ಸುಮಾರು 20 ಮಕ್ಕಳಿಗೆ ಲಸಿಕೆ ನೀಡಲಾಯಿತು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್‌ ಕುಮಾರ್‌, ವೆನ್ಲಾಕ್‌ ಅಧೀಕ್ಷಕ ಡಾ.ಸದಾಶಿವ ಶಾನುಭಾಗ್‌, ವ್ಯಾಕ್ಸಿನ್‌ ನೋಡಲ್‌ ಅಧಿಕಾರಿ ಡಾ.ರಾಜೇಶ್‌ ಬಿ.ವಿ., ತಾಲೂಕು ವೈದ್ಯಾಧಿಕಾರಿ ಡಾ.ಸುಜಯ್‌ ಭಂಡಾರಿ ಮೊದಲಾದವರಿದ್ದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ., ಜಿಲ್ಲೆಯಲ್ಲಿ ಸುಮಾರು 73 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಲಾಗಿದ್ದು, ಹಂತಹಂತವಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದು. ಆರಂಭದಲ್ಲಿ ವೆನ್ಲಾಕ್‌ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ. ನಂತರದಲ್ಲಿ ಶಾಲಾ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net