ಲಸಿಕೆ ಹಾಕಿಸಿ ಜಾನುವಾರುಗಳ ಆರೋಗ್ಯ ಕಾಪಾಡಿ

26LNG04
Published on

ಲಿಂಗಸುಗೂರು: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಕಾಲು ಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಶಾಸಕ ಮಾನಪ್ಪ ವಜ್ಜಲ್ ಹಾಗೂ ಎಂಎಲ್‌ಸಿ ಶರಣಗೌಡ ಬಯ್ಯಪುರ ಮಂಗಳವಾರ ಚಾಲನೆ ನೀಡಿದರು.

ಜಾನುವಾರುಗಳಿಗೆ ಲಸಿಕೆ ಹಾಕಿಸಿ ಅವುಗಳ ಆರೋಗ್ಯ ಸಂರಕ್ಷಿಸಬೇಕು. ಪ್ರಾಣಿಗಳಿಗೆ ಬರುವ ರೋಗ ರುಜಿನಗಳ ಮುನ್ನೆಚ್ಚರಿಕೆ ಕ್ರಮವಾಗಿ ತಪಾಸಣೆ ನಡೆಸಿ ಚಿಕಿತ್ಸೆ ಕೊಡಿಸಬೇಕು. ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net