ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಪ್ರಮಾಣಪತ್ರ

7-msk-1
Published on

ಮಸ್ಕಿ: ದಡಾರ ಮತ್ತು ರುಬೆಲ್ಲಾ ನಿರ್ಮೂಲನೆಗಾಗಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡಲಾಗುವ ಇಂದ್ರಧನುಷ್ ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕು ಎಂದು ಬಳಗಾನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೌಲಾಸಾಬ್ ಮುದ್ದಾಪುರ ಹೇಳಿದರು.

ಬಳಗಾನೂರಿನ ಅಂಗನವಾಡಿ ಕೇಂದ್ರದಲ್ಲಿ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಇಂದ್ರಧನುಷ್ ಲಸಿಕೆ ಉಚಿತವಾಗಿ ಹಾಕಲಾಗುತ್ತಿದ್ದು, ಲಸಿಕೆ ಹಾಕಿಸಿಕೊಂಡವರಿಗೆ ಪ್ರಮಾಣಪತ್ರ ನೀಡಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ಸದಸ್ಯೆ ಸಂಗೀತಾ ಗಣೇಶ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಮುಖರಾದ ಪ್ರಕಾಶ, ಜಯಶ್ರೀ, ಮಂಜುಳಾ, ಅಂಗನವಾಡಿ ಕಾರ್ಯಕರ್ತೆಯರಾದ ಲಿಂಗಮ್ಮ, ಭವಾನಿ, ಅಂಗನವಾಡಿ ಕಾರ್ಯಕರ್ತೆ ವಿಜಯಲಕ್ಷ್ಮೀ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net