

ವಿಜಯವಾಣಿ ಸುದ್ದಿಜಾಲ ಧಾರವಾಡ
ಲಿಂಗಾಯತ ಮಠಾಽಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ, ಕರ್ನಾಟಕ ಲಿಂಗಾಯತ ಒಳಪಂಗಡಗಳ ಏಕತಾ ಸಮಿತಿ, ಇತರ ಸಂಘಟನೆಗಳ ಆಶ್ರಯದಲ್ಲಿ ವಚನ ದರ್ಶನ ಮಿಥ್ಯ ವರ್ಸಸ್ ಸತ್ಯ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಏ. 19ರಂದುಬೆಳಗ್ಗೆ 10.30ಕ್ಕೆ ಲಿಂಗಾಯತ ಭವನದಲ್ಲಿ ಆಯೋಜಿಸಲಾಗಿದೆ. ಹುಬ್ಬಳ್ಳಿ ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಗದಗ ಶ್ರೀ ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ, ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಅಕ್ಕಮಹಾದೇವಿ ಪೀಠದ ಶ್ರೀ ಜ್ಞಾನೇಶ್ವರಿ ಮಾತಾಜಿ ಸಾನ್ನಿಧ್ಯ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಶಿವಾನಂದ ಜಾಮದಾರ ಗ್ರಂಥ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ. ವೀರಣ್ಣ ರಾಜೂರ ಗ್ರಂಥ ಪರಿಚಯಿಸುವರು.