30 ರಂದು ವಚನ ಗಾಯನ ಸ್ಪರ್ಧೆ

Published on

ಮೈಸೂರು: ಶರಣ ಸಾಹಿತ್ಯ ಪರಿಷತ್ತಿನ ಮೈಸೂರು ನಗರ ಘಟಕದಿಂದ ನ.30 ರಂದು ವಚನ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ.

ಜೆಎಸ್‌ಎಸ್ ಆಸ್ಪತ್ರೆಯ ರಾಜೇಂದ್ರ ಭವನದಲ್ಲಿ ಆಯೋಜಿಸಿರುವ ಸ್ಪರ್ಧೆಯಲ್ಲಿ ಯಾವುದೇ ವಯಸ್ಸಿನ ಭೇದವಿಲ್ಲದೆ ಭಾಗವಹಿಸಬಹುದು. ಒಬ್ಬರು ಒಂದು ವಚನವನ್ನು ಹಾಡಬೇಕು. ಆಕರ್ಷಕ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಭಾಗವಹಿಸುವವರು ನ. 25ರೊಳಗೆ ತಮ್ಮ ಹೆಸರನ್ನು ಮೊ.9535500538 ಇವರಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಘಟಕದ ಅಧ್ಯಕ್ಷ ಮ.ಗು.ಸದಾನಂದಯ್ಯ ಹೇಳಿಕೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net