ವಡೇರಹಟ್ಟಿ ಅಂಗನವಾಡಿ ಮಾದರಿ

web3
ವಡೇರಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂಗನವಾಡಿ ಸ್ಮಾರ್ಟ್ ಕ್ಲಾಸ್ ಕೇಂದ್ರ ಉದ್ಘಾಟನೆ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಅಕ್ಕವ್ವ ಮಳಿವಡೇರ, ಮಹಾದೇವ ಸನ್ಮುರಿ ಇತರರಿದ್ದರು.
Published on

ಮೂಡಲಗಿ: ವಡೇರಹಟ್ಟಿಯಲ್ಲಿ ನಿರ್ಮಾಣಗೊಂಡಿರುವ ಸ್ಮಾರ್ಟ್ ಕ್ಲಾಸ್ ಅಂಗನವಾಡಿ ಇಡೀ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಖಾಸಗಿ ಕಾನ್ವೆಂಟ್ ಮಾದರಿಯಲ್ಲಿ ಸರ್ಕಾರಿ ಅಂಗನವಾಡಿ ನಿರ್ಮಾಣವಾಗಿರುವುದು ಮನಸ್ಸಿಗೆ ಖುಷಿ ತರಿಸಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಅರಬಾವಿ ಶಿಶು ಅಭಿವೃದ್ಧಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಸ್ಮಾರ್ಟ್ ಕ್ಲಾಸ್ ಕೇಂದ್ರದ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಅರಬಾವಿ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಹೊಸ ಸ್ಮಾರ್ಟ್ ಕ್ಲಾಸ್ ಕಟ್ಟಡಗಳ ಪರಿಕಲ್ಪನೆಗಳು ಇತರರಿಗೆ ಮಾದರಿಯಾಗಿವೆ. ಅದಕ್ಕಾಗಿ ಸಿಡಿಪಿಒ
ವೈ.ಕೆ.ಗದಾಡಿ ಅವರನ್ನು ಅಭಿನಂದಿಸುತ್ತೇನೆ ಎಂದರು.

ಉದಗಟ್ಟಿ, ಖಂಡ್ರಟ್ಟಿ, ಹಳ್ಳೂರ, ಸುಣಧೋಳಿ, ತುಕ್ಕಾನಟ್ಟಿ, ಹೊಸಟ್ಟಿ, ದಂಡಾಪುರ ಗ್ರಾಮಗಳಿಗೆ ಅಂಗನವಾಡಿ ಕಟ್ಟಡ ಕಾಮಗಾರಿಗಳಿಗಾಗಿ ತಲಾ 20 ಲಕ್ಷ ರೂ. ಗಳಂತೆ ಒಟ್ಟು 1.40 ಕೋಟಿ ರೂ. ಅನುದಾನ ಬಂದಿದೆ. ಶೀಘ್ರದಲ್ಲಿಯೇ ಕಟ್ಟಡ ಕಾಮಗಾರಿಗಳು ನಡೆಯಲಿವೆ. ತಲಾ 16 ಲಕ್ಷ ರೂ ವೆಚ್ಚದ ಅವರಾದಿ, ನಲ್ಲಾನಟ್ಟಿ, ತಲಾ 20 ಲಕ್ಷ ರೂ ವೆಚ್ಚದ ಮೂಡಲಗಿ, ಗುರ್ಲಾಪುರದಲ್ಲಿ ಕಟ್ಟಡ ಕಾಮಗಾರಿಗಳು ಪ್ರಗತಿಯಲ್ಲಿವೆ. ಇವುಗಳಿಗೆ ಒಟ್ಟು 72 ಲಕ್ಷ ರೂ. ತಗುಲಿದೆ. ರಾಜಾಪುರ ಗ್ರಾಮದಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡಿದೆ ಎಂದರು.

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ: ಗ್ರಾಪಂನಿಂದ 10 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷೆ ಅಕ್ಕವ್ವ ಮಳಿವಡೇರ, ಮೂಡಲಗಿ ತಹಸೀಲ್ದಾರ್ ಮಹಾದೇವ ಸನ್ಮುರಿ, ತಾಪಂ ಇಒ ಫಕೀರಪ್ಪ ಚಿನ್ನನ್ನವರ, ಅರಬಾವಿ ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ, ಪ್ರಭಾ ಶುಗರ್ ನಿರ್ದೇಶಕಿ ಯಲ್ಲವ್ವ ಸಾರಾಪುರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಯ್ಯ ಬಡ್ನಿಂಗಗೋಳ,

ಗ್ರಾಪಂ ಉಪಾಧ್ಯಕ್ಷೆ ಲಕ್ಕವ್ವ ಸಾರಾಪುರ, ಎಪಿಎಂಸಿ ಮಾಜಿ ಅಧ್ಯಕ್ಷ ಎ.ಟಿ. ಗಿರಡ್ಡಿ, ಮುರಳಿ ವಜ್ರಮಟ್ಟಿ, ಪ್ರಮುಖರಾದ ಬನಪ್ಪ ವಡೇರ, ಚಂದ್ರು ಮೋಟೆಪ್ಪಗೋಳ, ವಿಠ್ಠಲ ಗಿಡೋಜಿ, ಅಡಿವೆಪ್ಪ ಹಾದಿಮನಿ, ರುದ್ರಗೌಡ ಪಾಟೀಲ, ಮಾರುತಿ ಪೂಜೇರಿ, ಗೋಪಾಲ ಬೀರನಗಡ್ಡಿ, ಮಾರುತಿ ನಂದಿ, ಸಂಗಪ್ಪ ಪೂಜೇರಿ, ಮಹಾಂತೇಶ ಬಡಿಗೇರ, ರಮೇಶ ಈರಗಾರ, ಶಿದ್ಲಿಂಗ ಗಿಡೋಜಿ, ಪಿಡಿಒ ಶಿವಾನಂದ ಗುಡಸಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net