ವಾದಿರಾಜ ಕಾಲೇಜು- ಬಿ ಪ್ರಾಕ್ಟಿಕಲ್ ಸಂಸ್ಥೆ ಒಪ್ಪಂದ

blm (3)
Published on

ಶಿರ್ವ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವು ಭವಿಷ್ಯದ ಇಂಜಿನಿಯರ್‌ಗಳನ್ನು ರೂಪಿಸುವ ನಿಟ್ಟಿನಲ್ಲಿ ಕೌಶಲ ಅಭಿವೃದ್ಧಿ ಮತ್ತು ಉದ್ಯಮ ತರಬೇತಿಯಲ್ಲಿ ಮುಂಚೂಣಿಯಲ್ಲಿರುವ ಬಿ ಪ್ರಾಕ್ಟಿಕಲ್ ಸಂಸ್ಥೆಯ ಜತೆ ಒಡಂಬಡಿಕೆ ಮಾಡಿಕೊಂಡಿದೆ. ಕಾಲೇಜಿನಲ್ಲಿ ಇತ್ತೀಚೆಗೆ ಎರಡೂ ಸಂಸ್ಥೆಗಳ ಪ್ರಮುಖರು ಒಪ್ಪಂದಕ್ಕೆ ಸಹಿ ಹಾಕಿದರು.

ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೊ.ಡಾ.ರಾಧಾಕೃಷ್ಣ ಎಸ್.ಐತಾಳ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವ ಉದ್ದೇಶವನ್ನು ಗಮನದಲ್ಲಿ ಇಟ್ಟುಕೊಂಡು ಎರಡು ಸಂಸ್ಥೆಗಳು ಕಾರ್ಯ ನಿರ್ವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡೀನ್‌ಗಳು, ವಿಭಾಗದ ಮುಖ್ಯಸ್ಥರು, ಪ್ಲೇಸ್ಮೆಂಟ್ ಅಧಿಕಾರಿಗಳು ಹಾಗೂ ಬಿ ಪ್ರಾಕ್ಟಿಕಲ್‌ನ ನಿರ್ದೇಶಕ ಹರೀಶ್ ಕುಮಾರ್ ಮತ್ತು ಅಸೋಸಿಯೇಟ್ ಮ್ಯಾನೇಜರ್ ಆದರ್ಶ ಉಪಸ್ಥಿತರಿದ್ದರು. ಈ ಒಡಂಬಡಿಕೆಯ ಮುಖ್ಯ ಉದ್ದೇಶ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಉದ್ಯೋಗ ಕೌಶಲಗಳು, ಡಿಜಿಟಲ್ ಕಲಿಕಾ ವೇದಿಕೆಯನ್ನು ಒದಗಿಸುವುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net