ವೈದ್ಯಶ್ರೀ ಪ್ರಶಸ್ತಿ ಪ್ರದಾನ 8ರಂದು

WhatsApp Image 2024-12-05 at 11.34.16 AM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹಾವೇರಿಯ ಕಲಾಸ್ಪಂದನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಹಿರೇಬಾಸೂರು ಗ್ರಾಮದ ರೈತ ದಿ. ಮËನೇಶಪ್ಪ ಕತ್ತಿ ಅವರ ಹೆಸರಿನಲ್ಲಿ ಕೊಡಮಾಡುವ 2024ನೇ ಸಾಲಿನ `ವೈದ್ಯಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಡಿ. 8ರಂದು ಬೆಳಗ್ಗೆ 10.30ಕ್ಕೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರದ ಸ್ವರ್ಣ ಪ್ಯಾರಡೈಸ್ ಹೋಟೆಲ್‌ನ ಮಂಥನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮಾರ್ತಾಂಡಪ್ಪ ಕತ್ತಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯ ಕೆಎಂಸಿಆರ್‌ಐನ ರಕ್ತ ನಿಽ ಕೇಂದ್ರದ ಸಹ ಪ್ರಾಧ್ಯಾಪಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರ ತಾಲೂಕಿನ ಸುಶ್ರೂತಾ ಆಯುರ್ವೇದ ಆಸ್ಪತ್ರೆಯ ಶಸ್ತçಚಿಕಿತ್ಸಕ ಡಾ. ರವಿಶಂಕರ ಪರ್ವಾಜೆ ಅವರಿಗೆ ಶಾಸಕ ಮಹೇಶ ಟೆಂಗಿನಕಾಯಿ `ವೈದ್ಯಶ್ರೀ' ಪ್ರಶಸ್ತಿ ಪ್ರದಾನ ಮಾಡುವರು. ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸುವರು. ಕಲಾಸ್ಪಂದನದ ಅಧ್ಯಕ್ಷ ಮತ್ತು ಸ್ವರ್ಣ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ ಪ್ರಸಾದ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಕರ್ನಾಟಕ ರೇಷ್ಮೆಮಾರಾಟ ಮಂಡಳಿಯ ಮಾಜಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಚ್. ಚನ್ನೂರ, ಇತರರು ಅತಿಥಿಯಾಗಿ ಪಾಲ್ಗೊಳ್ಳುವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net