ಬೆಂಗಳೂರು: ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆಗಳು ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ಸರದಿ ನಿಂತು ದೇವರ ದರ್ಶನ ಪಡೆದರು. ರಾಜಕೀಯ ನೇತಾರರೂ ದೇವಸ್ಥಾನಗಳಿಗೆ ತೆರಳಿ ಪೂಜೆಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು
ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಮೀರ್ ಅಹಮ್ಮದ್ ಮತ್ತು ಇತರರು ಜತೆಗಿದ್ದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್ಗಾಗಿ ನಮ್ಮ ಫೇಸ್ಬುಕ್ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..