ಗದಗ ಜಿಲ್ಲಾಧಿಕಾರಿಯಾಗಿ ವೈಶಾಲಿ ಎಂ.ಎಲ್. ಅಧಿಕಾರ ಸ್ವೀಕಾರ

11-gdg-dc vaishali ML
Published on


ಗದಗ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2013ರ ಬ್ಯಾಚ್​ನ ಐಎಎಸ್ ಅಧಿಕಾರಿ ವೈಶಾಲಿ ಎಂ.ಎಲ್. ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪ್ರಭಾರಿ ಜಿಲ್ಲಾಧಿಕಾರಿಗಳಾಗಿದ್ದ ಡಾ. ಸುಶೀಲಾ ಬಿ., ಅವರು ವೈಶಾಲಿ ಎಂ.ಎಲ್. ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಶಿವಮೊಗ್ಗ ತಹಸೀಲ್ದಾರರಾಗಿ ವೃತ್ತಿ ಆರಂಭಿಸಿದ್ದ ವೈಶಾಲಿ ಎಂ.ಎಲ್. ಅವರು ಹಾಸನ ಹಾಗೂ ಮಂಗಳೂರಿನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿ, ಶಿವಮೊಗ್ಗ ಉಪವಿಭಾಗಾಧಿಕಾರಿ, ರಾಮನಗರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ, ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ಶಿವಮೊಗ್ಗ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net