25ರಿಂದ ವೈಶ್ಯವಾಣಿ ಒಲಿಂಪಿಕ್ಸ್

Published on

ಉಡುಪಿ: ಎಲ್‌ವಿಟಿ ಫ್ರೆಂಡ್ಸ್ ಪುತ್ತೂರು ನೇತೃತ್ವದಲ್ಲಿ ಏ.25ರಿಂದ 27ರವರೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ಹಾಗೂ ಎಂಜಿಎಂ ಕಾಲೇಜು ಮೈದಾನದಲ್ಲಿ ವೈಶ್ಯವಾಣಿ ಒಲಿಂಪಿಕ್ಸ್ ನಡೆಯಲಿದೆ ಎಂದು ಅಧ್ಯಕ್ಷ ಲಕ್ಷ್ಮೀಕಾಂತ್ ಶೇಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

25ರಂದು ಬೆಳಗ್ಗೆ 9.30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆ ಸಮಾರಂಭ ಆಯೋಜಿಸಲಾಗಿದೆ. ಶಾಸಕರಾದ ಯಶ್‌ಪಾಲ್ ಎ.ಸುವರ್ಣ, ಗುರುರಾಜ ಗಂಟಿಹೊಳೆ, ಎಲ್‌ವಿಟಿ ದೇವಸ್ಥಾನ ಅರ್ಚಕ ಅನಂತ ಭಟ್ ಭಾಗವಹಿಸಲಿದ್ದಾರೆ.

25ರಂದು ಕ್ರೀಡಾಕೂಟದಲ್ಲಿ ಶಟಲ್ ಬ್ಯಾಡ್ಮಿಂಟನ್, ಈಜು ಸ್ಪರ್ಧೆ ನಡೆಯಲಿವೆ. 26ರಂದು ಎಂಜಿಎಂ ಕಾಲೇಜು ಮೈದಾನದಲ್ಲಿ ವಾಲಿಬಾಲ್, ತ್ರೋಬಾಲ್, ಹಗ್ಗ ಜಗ್ಗಾಟ, ಗುಡ್ಡಗಾಡು ಓಟ, ಕ್ರಿಕೆಟ್ ಪಂದ್ಯಾಟ ನಡೆಯಲಿದೆ ಎಂದರು.

ಸಂಘಟನೆ ಉಪಾಧ್ಯಕ್ಷರಾದ ಭರತ್ ಶೇಟ್, ಸಚಿನ್ ನಾಯ್ಕ, ಗೌರವಾಧ್ಯಕ್ಷ ವಾಸುದೇವ, ಸಾಂಸ್ಕೃತಿಕ ಕಾರ್ಯದರ್ಶಿ ಧನುಷ್ ಗಾಂಸ್, ಕೋಶಾಧಿಕಾರಿ ಸಚಿನ್ ಶೇಟ್, ಸದಸ್ಯರಾದ ಅಜಯ್, ಪ್ರದೀಪ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net